ADVERTISEMENT

ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2024, 11:14 IST
Last Updated 21 ಸೆಪ್ಟೆಂಬರ್ 2024, 11:14 IST
<div class="paragraphs"><p>ಪ್ರಲ್ಹಾದ ಜೋಶಿ</p></div>

ಪ್ರಲ್ಹಾದ ಜೋಶಿ

   

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು.

ADVERTISEMENT

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ ಕೋಟಿ ಜಮೆ ಮಾಡಲಾಗಿದೆ. ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ವಿವಿಧ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಯನ್ನು ಎಂಎಸ್‌ ಪಿ) ಹೆಚ್ಚಿಸಲಾಗಿದೆ ಎಂದರು.

ಸೌರಶಕ್ತಿ ಬಳಕೆಗೆ ರೈತರನ್ನು ಪ್ರೋತ್ಸಾಹಿಸಬೇಕು. ಕುಸುಮ, ಸೂರ್ಯ ಘರ್ ಯೋಜನೆಗಳ ಬಗ್ಗೆ ತಿಳಿಸಬೇಕು. ರಾಜ್ಯ ಸರ್ಕಾರ ವಿದ್ಯುತ್ ಪುಕ್ಕಟ್ಟೆಯಾಗಿ ಪೊರೈಸುತ್ತಿದೆ. ಪುಕ್ಕಟ್ಟೆಯಾಗಿ ವಿದ್ಯುತ್ ಪೂರೈಸಿ ಹಿಮಾಚಲ ಪ್ರದೇಶ ಸರ್ಕಾರ ದಿವಾಳಿಯಾಗಿದೆ ಎಂದರು.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್. ಪಾಟೀಲ, ಕುಲಸಚಿವೆ ಜಯಲಕ್ಷ್ಮಿ, ಶಾಸಕ ಮಹೇಶ ಟೆಂಗಿನಕಾಯಿ ಪಾಲ್ಗೊಂಡಿದ್ದರು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.