ಧಾರವಾಡ: ವಾಹನ ಸಾಲ ವಿಚಾರದಲ್ಲಿ ₹8 ಸಾವಿರ ಲಂಚ ಪಡೆಯುವಾಗ ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್‌ಎಫ್‌ಸಿ) ಉಪ ವ್ಯವಸ್ಥಾಪಕ ಎನ್.ರಮೇಶ್ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಸಿಕ್ಕಿ ಬಿದ್ದಿದ್ದಾರೆ.
ರಾಯಾಪುರದ ಕಚೇರಿಯಲ್ಲಿ ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಶಂಕರ ರಾಗೆ ನೇತೃತ್ವದ ತಂಡ ದಾಳಿ ನಡೆಸಿದೆ.
ಹಾವೇರಿ ಜಿಲ್ಲೆಯ ಪ್ರವೀಣ್ ಮಾಳಗಿ ಅವರು ವಾಹನಕ್ಕೆ ಸಾಲಕ್ಕೆ ಅರ್ಜಿ ಸಲ್ಲಿಸಿದ್ದರು. ಸಾಲ ಮಂಜೂರಾತಿ ವಿಚಾರದಲ್ಲಿ ರಮೇಶ್ ಅವರು ಎಂಟು ಸಾವಿರ ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.