ADVERTISEMENT

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ

Manjunath C Bhadrashetti
Published 30 ಸೆಪ್ಟೆಂಬರ್ 2024, 7:21 IST
Last Updated 30 ಸೆಪ್ಟೆಂಬರ್ 2024, 7:21 IST
<div class="paragraphs"><p>ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ</p></div>

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ

   

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆ್ಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ADVERTISEMENT

ಕಸಬಾ ಹೋಬಳಿ ವೃತ್ತಗಳನ್ನು 'ಗ್ರೇಡ್-1 ಗ್ರಾಮ ಆಡಳಿತಾಧಿಕಾರಿ' ಹುದ್ದೆಯಾಗಿ ಮೇಲ್ದರ್ಜೆಗೇರಿಸಬೇಕು. ಪ್ರಯಾಣ ಭತ್ಯೆಯನ್ನು ₹500 ರಿಂದ₹ 3000ಕ್ಕೆ ಏರಿಸಬೇಕು. ಅಂತರ ಜಿಲ್ಲಾ ವರ್ಗಾವಣೆ ಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಖಜಾಂಚಿ ಮಂಜುನಾಥ ಬಾಗೋಡಿ, ಸುವರ್ಣಾ, ಮಹಾಂತೇಶ, ವೆಂಕಟೇಶ, ಜಕ್ಕನಗೌಡ ಪಾಟೀಲ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.