ADVERTISEMENT

ಧಾರವಾಡ | ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ವಿತರಣೆ: ವಿದ್ಯಾರ್ಥಿಗಳ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 16:07 IST
Last Updated 5 ಅಕ್ಟೋಬರ್ 2024, 16:07 IST
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯದ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯದ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು   

ಧಾರವಾಡ: ನಗರದ ಸಪ್ತಾಪುರದಲ್ಲಿರುವ ಮೆಟ್ರಿಕ್‌ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಅನ್ನದ ಪಾತ್ರೆ, ಸಂಬಾರ್‌ ಬಕೆಟ್‌ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು. ‘ಕೊಳೆತ ತರಕಾರಿ ಬಳಸಿ ಆಹಾರ ಸಿದ್ಧಪಡಿಸುತ್ತಾರೆ. ಧಾನ್ಯಗಳಲ್ಲಿ ಹುಳಗಳು ಇರುತ್ತವೆ. ಗುಣಮಟ್ಟದ ಊಟ ಸಿಗದೆ ತೊಂದರೆಯಾಗುತ್ತಿದೆ. ವಸತಿ ನಿಲಯ ಸಮಸ್ಯೆಗಳ ಗೂಡಾಗಿದೆ’ ಎಂದು ಪ್ರತಿಭಟನಕಾರರು ದೂರಿದರು. 

‘ವಸತಿ ನಿಲಯದ ಅಡುಗೆಮನೆ ಮತ್ತು ಆಹಾರದ ಗುಣಮಟ್ಟ ಪರಿಶೀಲಿಸಬೇಕು. ಸಮಸ್ಯೆ ಪರಿಹರಿಸದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು. ಈ ಬಗ್ಗೆ ಹಲವು ಬಾರಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ರಮ ಜರುಗಿಸಿಲ್ಲ’ ಎಂದು ಆರೋಪಿಸಿದರು. 

ADVERTISEMENT

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಛಲವಾದಿ, ಸುರೇಶ ಕೋರೆ, ವಿದ್ಯಾರ್ಥಿಗಳಾದ ಉದಯ, ದೇವರಾಜ ಸಂಪತ್ತನಾಯ್ಕ, ಸಂತೋಷ ಲಮಾಣಿ, ಮಾರುತಿ, ರಾಹುಲ್, ಬಸನಗೌಡ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.