ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಈದ್-ಉಲ್-ಫಿತ್ರ್ ಅಂಗವಾಗಿ ಮುಸ್ಲಿಮರು ಗುರುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಕ್ಕಳು, ವೃದ್ಧರು, ಯುವಕರು ಹೊಸ ಬಟ್ಟೆ ಧರಿಸಿ, ಉರಿ ಬಿಸಿಲಿನಲ್ಲೂ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಸಮುದಾಯದವರು ಪರಸ್ಪರ ಅಪ್ಪಿಕೊಂಡು, ಹಬ್ಬದ ಶುಭಾಶಯ ವಿನಿಮಯಮಾಡಿಕೊಂಡರು. ಪ್ರಾರ್ಥನೆ ನಂತರ ಬಡವರಿಗೆ ದಾನ ನೀಡಿದರು. ಲೋಕ ಕಲ್ಯಾಣಕ್ಕೆ ಅಲ್ಲಾಹುವಿನಲ್ಲಿ ಪ್ರಾರ್ಥನೆ ಸಲ್ಲಿಸಿದ ಧರ್ಮಗುರುಗಳು, ಹಬ್ಬದ ಸಂದೇಶ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.