ADVERTISEMENT

ಧಾರವಾಡ | ಮಗು ಸಾವು; ಡೆಂಗಿ ಶಂಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 12:26 IST
Last Updated 18 ಜುಲೈ 2024, 12:26 IST
ಡೆಂಗಿ ಹರಡುವ ಈಡಿಸ್ ಸೊಳ್ಳೆ
ಡೆಂಗಿ ಹರಡುವ ಈಡಿಸ್ ಸೊಳ್ಳೆ   

ಧಾರವಾಡ: ಜ್ವರದಿಂದ ಬಳಲುತ್ತಿದ್ದ ಐದು ತಿಂಗಳ ಹೆಣ್ಣು ಮಗು ಆರಾಧ್ಯಾ ಲಮಾಣಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ತಡರಾತ್ರಿ ಮೃತಪಟ್ಟಿದೆ. ಡೆಂಗಿ ಶಂಕೆ ವ್ಯಕ್ತವಾಗಿದೆ.

ಪೊಲೀಸ್‌ ಕಾನ್‌ಸ್ಟೆಬಲ್‌ ಗೋಪಾಲ ಲಮಾಣಿ ಪುತ್ರಿ ಆರಾಧ್ಯಾಗೆ ಡೆಂಗಿ ಜ್ವರ ಲಕ್ಷಣಗಳಿದ್ದವು. ಪೋಷಕರು ಮಗುವನ್ನು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

‘ಎನ್‌ಎಸ್‌1 ಪರೀಕ್ಷೆಯಲ್ಲಿ ಡೆಂಗಿ ಪತ್ತೆಯಾಗಿದೆ. ರಕ್ತವನ್ನು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.