ಹುಬ್ಬಳ್ಳಿ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರು ಕರ್ನಾಟಕ ಭಾಗದಿಂದ ನಮ್ಮ ಪಕ್ಷದ 20 ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿ ಹೊಂದಿದ್ದೇವೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಹೇಳಿದರು.
ನಗರದ ಹೊರವಲಯದ ವೈಷ್ಣವಿ ಹೊಟೇಲ್‍ನಲ್ಲಿ ನಡೆದ ಜೆಡಿಎಸ್ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ‘ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೇರುವ ಗುರಿ ಹೊಂದಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ವಿಚಾರವಾಗಿ ಬಿಡದಿಯಲ್ಲಿ ಕಾರ್ಯಾಗಾರ, ಬೆಂಗಳೂರಿನಲ್ಲಿ ಜಿಲ್ಲಾವಾರು ಜನತಾ ಸಂಗಮ ಹೆಸರಿನಲ್ಲಿ ಸಂಘಟನೆ, ಸದಸ್ಯತ್ವ ಅಭಿಯಾನ ಹೀಗೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ’ ಎಂದರು.
ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ಬಿ.ಬಿ. ಗಂಗಾಧರಮಠ, ಮಹಾನಗರ ಘಟಕದ ಅದ್ಯಕ್ಷ ಗುರುರಾಜ ಹುಣಸೀಮರದ, ಕಾರ್ಯಾಧ್ಯಕ್ಷ ಸಾಧೀಕ ಹಕೀಂ, ವೀರನಗೌಡ ಮರಿಗೌಡ್ರ, ಹಾವೇರಿ ಜಿಲ್ಲಾ ಘಟಕದ ಧ್ಯಕ್ಷ ಮಲ್ಲಿಕಾರ್ಜುನ ಹಲಗೇರಿ, ಗದಗ ಜಿಲ್ಲಾ ಘಟಕದ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷ ಹಜರತಅಲಿ ಜೋಡಮನಿ, ಹುಬ್ಬಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ ಹುಬ್ಬಳ್ಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.