ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಎನ್‌ಡಬ್ಲುಕೆಆರ್‌ಟಿಸಿ) ಏಳು ಜಿಲ್ಲೆಗಳಿಗೆ ಹೊಸದಾಗಿ 784 ಬಸ್‌ಗಳು ಬರಲಿವೆ. ಮಾರ್ಚ್ ಹೊತ್ತಿಗೆ ಬಸ್‌ಗಳು ಪೂರೈಸಲು ಸೂಚನೆ ನೀಡಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರ ಸಾರಿಗೆ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಶಕ್ತಿ ಯೋಜನೆ ಜಾರಿಗೊಳಿಸಿದ ನಂತ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ. ಹೊಸ ಬಸ್‌ಗಳು ಬಂದ ನಂತರ ಈ ಒತ್ತಡ ಕಡಿಮೆಯಾಗಲಿದೆ. ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳಿಗೆ ಮುಂದಿನ ದಿನಗಳಲ್ಲಿ 100 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗುವುದು ಎಂದರು.
‘ಈಗ ಹೊಸದಾಗಿ ನಾವು 2 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿಯವರು ಒಂದು ಬಸ್ ಅನ್ನೂ ಖರೀದಿಸಿರಲಿಲ್ಲ. ನೇಮಕಾತಿಯನ್ನು ಮಾಡಿರಲಿಲ್ಲ’ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಮಾತನಾಡಿ, ₹13 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನವೀಕರಣಗೊಳಿಸಲಾಗುತ್ತಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.