ADVERTISEMENT

ಮೇಯರ್‌, ಉಪ ಮೇಯರ್‌ ಚುನಾವಣೆ 29ಕ್ಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2024, 15:55 IST
Last Updated 19 ಜೂನ್ 2024, 15:55 IST

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌, ಉಪಮೇಯರ್‌ ಚುನಾವಣೆ ಜೂನ್‌ 29ರಂದು ಮಧ್ಯಾಹ್ನ 1ಕ್ಕೆ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್‌.ಬಿ.ಶೆಟ್ಟೆಣ್ಣವರ ಬುಧವಾರ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಅಂದು ಬೆಳಿಗ್ಗೆ 9ರಿಂದ 11ರವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ 1ಕ್ಕೆ ಸದಸ್ಯರ ಹಾಜರಾತಿ, ಕೋರಂ ಪರಿಶೀಲನೆ ಬಳಿಕ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆ ಹಿಂಪಡೆಯುವುದು, ಉಮೇದುವಾರರ ಪಟ್ಟಿ ಘೊಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಅಭ್ಯರ್ಥಿ ಒಬ್ಬರಿಗಿಂತ ಹೆಚ್ಚಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆಯಲಿದೆ. ಮೀಸಲಾತಿ ಅನ್ವಯ ಪ್ರಸ್ತುತ ಅವಧಿಗೆ ಮೇಯರ್‌ ಸ್ಥಾನ ಹಿಂದುಳಿದ ವರ್ಗ ‘ಎ’ ಪುರುಷ ಅಭ್ಯರ್ಥಿಗೆ ಹಾಗೂ ಪರಿಶಿಷ್ಟ ಜಾತಿ ಮಹಿಳೆಗೆ ಉಪಮೇಯರ್‌ ಸ್ಥಾನ ನಿಗದಿಗೊಳಿಸಲಾಗಿದೆ.

ADVERTISEMENT

82 ಸದಸ್ಯ ಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್‌, 3 ಎಐಎಂಐಎಂ, 6 ಮಂದಿ ಪಕ್ಷೇತರ ಹಾಗೂ ಒಬ್ಬ ಜೆಡಿಎಸ್‌ ಸದಸ್ಯರಿದ್ದಾರೆ. ಕಳೆದ ಚುನಾವಣೆಯಲ್ಲಿ ವಿಪ್‌ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಹೀಗಾಗಿ ಬಜೆಪಿಯ ಸದಸ್ಯ ಬಲ 38 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.