ಹುಬ್ಬಳ್ಳಿ: ನಗರದ ಗಬ್ಬೂರು ವೃತ್ತದ ಬಳಿ ಅನಧಿಕೃತವಾಗಿ ಇಟ್ಟುಕೊಂಡಿದ್ದ ಸುಮಾರು 30 ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಶನಿವಾರ ನಡೆಸಿದರು.
ಬೆಳಿಗ್ಗೆ 6.30ರ ಹೊತ್ತಿಗೆ ಜೆಸಿಬಿ ಹಾಗೂ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಬಂದ ಅಧಿಕಾರಿಗಳು, ಎಲ್ಲಾ ಅಂಗಡಿಗಳನ್ನು ತೆರವು ಮಾಡಿದರು. ಬಹುತೇಕ ಅಂಗಡಿಗಳಲ್ಲಿ ಚಹಾ, ಆಹಾರ, ಸಿಗರೇಟು ಸೇರಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಕಾರ್ಯಾಚರಣೆ ವೇಳೆ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
‘ಅನಧಿಕೃತವಾಗಿ ಅಂಗಡಿಗಳನ್ನು ತೆರವುಗೊಳಿಸುವಂತೆ ಮಾಲೀಕರಿಗೆ ಸೂಚಿಸಿದ್ದರೂ, ಕೆಲವರು ತಮ್ಮ ವ್ಯಾಪಾರ ಮುಂದುವರಿಸಿಕೊಂಡು ಬಂದಿದ್ದರು. ಹಾಗಾಗಿ, ಪೊಲೀಸರ ನೆರವಿನೊಂದಿಗೆ ಎಲ್ಲಾ ಅಂಗಡಿಗಳನ್ನು ತೆರವುಗೊಳಿಸಲಾಯಿತು’ ಎಂದು ವಲಯ ಕಚೇರಿ 11ರ ಸಹಾಯಕ ಆಯುಕ್ತ ಆನಂದ ಕಾಂಬಳೆ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.