ADVERTISEMENT

ಹೆಸ್ಕಾಂ: 3 ತಿಂಗಳಲ್ಲಿ ₹33.81 ಕೋಟಿ ಹಾನಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2024, 16:23 IST
Last Updated 24 ಜೂನ್ 2024, 16:23 IST

ಹುಬ್ಬಳ್ಳಿ: ಹೆಸ್ಕಾಂ ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ₹33.81 ಕೋಟಿ ಮೌಲ್ಯದ ವಿದ್ಯುತ್‌ ಉಪಕರಣಗಳು ಹಾನಿಯಾಗಿವೆ. ಬೆಳಗಾವಿ ಜಿಲ್ಲೆಯಲ್ಲೇ ಅತಿ ಹೆಚ್ಚು, ₹8.78 ಕೋಟಿ ನಷ್ಟವಾಗಿದೆ.

ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರ ಕನ್ನಡ, ಗದಗ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಒಟ್ಟು 1,216 ವಿದ್ಯುತ್‌ ಪರಿವರ್ತಕಗಳು, 10,448 ವಿದ್ಯುತ್‌ ಕಂಬಗಳು ಧರೆಗುಳಿದಿವೆ. ಈ ಪೈಕಿ 1,214 ವಿದ್ಯುತ್‌ ಪರಿವರ್ತಕಗಳು ಹಾಗೂ 10,076 ಕಂಬಗಳನ್ನು ದುರಸ್ತಿಗೊಳಿಸಲಾಗಿದೆ. ಹಾನಿಗೊಳಗಾದ 94.47 ಕಿ.ಮೀ.ಉದ್ದದ ವಿದ್ಯುತ್‌ ತಂತಿಗಳಲ್ಲಿ 92.24 ಕಿ.ಮೀ ಉದ್ದದ ವಿದ್ಯುತ್‌ ತಂತಿ ದುರಸ್ತಿ ಮಾಡಲಾಗಿದೆ.

ಬೆಳಗಾವಿಯಲ್ಲಿ ಹೆಚ್ಚು ಹಾನಿ: ಬೆಳಗಾವಿ ಜಿಲ್ಲೆಯಲ್ಲಿ 2,563 ವಿದ್ಯುತ್‌ ಕಂಬಗಳು ಉರುಳಿದ್ದರೆ, 477 ವಿದ್ಯುತ್‌ ಪರಿವರ್ತಕಗಳು ಹಾನಿಯಾಗಿದ್ದವು. 2.54 ಕಿ.ಮೀ. ಉದ್ದ ತಂತಿ ತುಂಡಾಗಿತ್ತು. ಬಹುತೇಕ ಎಲ್ಲ ದುರಸ್ತಿ ಕಾರ್ಯಗಳು ಮುಕ್ತಾಯದ ಹಂತದಲ್ಲಿವೆ.

ADVERTISEMENT

‘ಸಿಬ್ಬಂದಿ ಶರವೇಗದಲ್ಲಿ ದುರಸ್ತಿ ಕಾರ್ಯ ಕೈಗೊಂಡು ಪೂರ್ಣಗೊಳಿಸಿದ್ದಾರೆ’ ಎಂದು ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್‌ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.