ಧಾರವಾಡ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಬದಾಗುಂದಿ ಹಳ್ಳಿ ಸಮೀಪ ರೆಸಾರ್ಟ್‌ಗೆ ಒತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸುವಂತೆ ರೆಸಾರ್ಟ್‌ನ ಒಡತಿಗೆ ಹೈಕೋರ್ಟ್ ಧಾರವಾಡ ಪೀಠ ಆದೇಶಿಸಿದೆ.
ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಈ ಆದೇಶ ನೀಡಿದ್ಧಾರೆ. ವಿಸ್ಲಿಂಗ್ ವುಡ್ಸ್ ಒಡತಿ ಸ್ಮಿತಾ ಅವರಿಗೆ ಸ್ವಂತ ಖರ್ಚಿನಲ್ಲಿ ಒತ್ತುವರಿ ತೆರವುಗೊಳಿಸುವಂತೆ ತಿಳಿಸಲಾಗಿದೆ. ತೆರವುಗೊಳಿಸದಿದ್ದರೆ ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಬೇಕು. ಒತ್ತುವರಿ ತೆರವುಗೊಳಿಸಿ ಎರಡು ತಿಂಗಳೊಳಗೆ ಕೋರ್ಟ್‌ಗೆ ವರದಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿದ್ಧಾರೆ.
‘ವಿಸ್ಲಿಂಗ್ ವುಡ್ಸ್ ರೆಸಾರ್ಟ್‌ಗೆ ಅರಣ್ಯ ಜಾಗ ಅತಿಕ್ರಮಣ ಮಾಡಿರುವುದನ್ನು ಅರಣ್ಯ ಇಲಾಖೆಯು 2018ರಲ್ಲಿ ಗುರುತಿಸಿತ್ತು. ಇಲಾಖೆ ಕ್ರಮಕ್ಕೆ ಮುಂದಾಗಿತ್ತು. ಸ್ಮಿತಾ ಅವರು ಇಲಾಖೆಯ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಏರಿದ್ದರು’ ಎಂದು ಉತ್ತರ ಕನ್ನಡ ಜಿಲ್ಲೆಯ ಅರಣ್ಯಾಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.