ಹುಬ್ಬಳ್ಳಿ: ಚಿಕ್ಕೋಡಿಯ ಕಾಮಕುಮಾರ ಜೈನ ಮುನಿ ಹತ್ಯೆ ಹಿನ್ನೆಲೆಯಲ್ಲಿ ಜೈನ ಮುನಿಗಳಿಗೆ ರಕ್ಷಣೆ ನೀಡಬೇಕು ಎಂದು ಆಮರಣ ಉಪವಾಸ ಕೈಗೊಂಡು, ತಾತ್ಕಾಲಿಕವಾಗಿ ಕೈಬಿಟ್ಟಿದ್ದ ಇಲ್ಲಿನ ವರೂರು ನವಗೃಹ ತೀರ್ಥಕ್ಷೇತ್ರದ ಗುಣಧರನಂದಿ ಮಹಾರಾಜರನ್ನು ಗೃಹ ಸಚಿವ ಜಿ. ಪರಮೇಶ್ವರ ಸೋಮವಾರ ಭೇಟಿಯಾಗಿ ಚರ್ಚೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ, ವಿಮಲ ತಾಳಿಕೋಟೆ, ಮಹೇಂದ್ರ ಸಿಂಘಿ, ಶರಣಪ್ಪ ಕೊಟಗಿ, ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರು, ರಾಜಶೇಖರ ಮೆಣಸಿನಕಾಯಿ, ಸದಾನಂದ ಡಂಗನವರ, ಅನಿಲಕುಮಾರ ಪಾಟೀಲ, ಅಲ್ತಾಫ್ ಕಿತ್ತೂರು, ಯೂಸೂಫ್ ಸವಣೂರು, ಎಸ್ಪಿ ಲೋಕೇಶ ಜಗಲಾಸರ, ತಹಶೀಲ್ದಾರ್ ಪ್ರಕಾಶ ನಾಸಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.