ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ಮೇಯರ್, ಉಪಮೇಯರ್ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ.
ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ 30 ನೇ ವಾರ್ಡ್ ನ ರಾಮಪ್ಪ ಬಡಿಗೇರ, ಉಪಮೇಯರ್ ಸ್ಥಾನಕ್ಕೆ ವಾರ್ಡ್ 69ರ ದುರ್ಗಮ್ಮ ಬಿಜವಾಡ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ನಿಂದ ಮೇಯರ್ ಸ್ಥಾನಕ್ಕೆ ವಾರ್ಡ್ ನಂ.23 ರ ಇಮ್ರಾನ್ ಎಲಿಗಾರ, ಉಪಮೇಯರ್ ಸ್ಥಾನಕ್ಕೆ ವಾರ್ಡ್ 50ರ ಮಂಗಳಮ್ಮ ಹಿರೇಮನಿ ಅಭ್ಯರ್ಥಿಗಳಾಗಿದ್ದಾರೆ.
ಎಐಎಂಐಎಂನ ಪಕ್ಷದ ಹುಸೇನಬಿ ನಾಲತವಾಡ ( ವಾರ್ಡ್ ಸಂಖ್ಯೆ 77) ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಮೇಯರ್ ಸ್ಥಾನ ಹಿಂದುಳಿದ ವರ್ಗ ಎ, ಉಪಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದೆ.
82 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಜನ ಪಕ್ಷೇತರರು ಮತ್ತು ಒಬ್ಬ ಜೆಡಿಎಸ್ ಸದಸ್ಯರು ಇದ್ದಾರೆ. ಬೆಳಿಗ್ಗೆ 9 ರಿಂದ 11ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 1ಗಂಟೆಗೆ ಕೈ ಎತ್ತುವ ಮೂಲಕ ಮತದಾನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.