ADVERTISEMENT

ಹುಬ್ಬಳ್ಳಿ ಸ್ಫೋಟ ಪ್ರಕರಣ: ಆರ್‌ಪಿಎಫ್ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2019, 6:30 IST
Last Updated 23 ಅಕ್ಟೋಬರ್ 2019, 6:30 IST

ಹುಬ್ಬಳ್ಳಿ: ರೈಲ್ವೆ ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಆರ್ ಪಿಎಫ್ ಸಿಬ್ಬಂದಿ ನಿರ್ಲಕ್ಷ್ಯ ಮಾಡಿರುವುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ನೈರುತ್ಯ ರೈಲ್ವೆ ವಲಯ ಜಿಎಂ ಅಜಯಕುಮಾರ್ ಸಿಂಗ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯ ಭದ್ರತಾ ಆಯುಕ್ತರು ಈ ಬಗ್ಗೆ ವರದಿ ಕೊಡುತ್ತಾರೆ.ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ರೈಲ್ವೆ ನಿಲ್ದಾಣಕ್ಕೆ ವಿಮಾನ ನಿಲ್ದಾಣದ ರೀತಿ ಭದ್ರತೆ ಒದಗಿಸಲು ಆಗುವುದಿಲ್ಲ. ಎಲ್ಲರನ್ನೂ ತಪಾಸಣೆ ಮಾಡಲಾಗದು. ದುಷ್ಕರ್ಮಿಗಳು ಹಳಿ ಮೇಲಿಂದಲೂ ಬರುವ ಸಾಧ್ಯತೆಗಳಿವೆ. ನಿಲ್ದಾಣದಲ್ಲಿ ಅಗತ್ಯ ಭದ್ರತೆ ಒದಗಿಸಲಾಗಿದೆ.

ADVERTISEMENT

ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಲಾಗಿದೆ. ಎಫ್.ಎಸ್.ಎಲ್‌ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.