ADVERTISEMENT

ಹುಬ್ಬಳ್ಳಿಗೆ ಮತ್ತೊಂದು ಬಿಹಾರ ಎನ್ನುವ ಅಪಕೀರ್ತಿ: ಬಸವಜಯಮೃತ್ಯುಂಜಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 18 ಮೇ 2024, 7:59 IST
Last Updated 18 ಮೇ 2024, 7:59 IST
   

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಪೊಲೀಸರ ವೈಫಲ್ಯದಿಂದ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ಇಲ್ಲಿನ ವೀರಾಪುರ ಓಣಿಯಲ್ಲಿರುವ ಅಂಜಲಿ ಅವರ ನಿವಾಸಕ್ಕೆ ಶನಿವಾರ ಭೇಟಿ‌ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.

ಯುವತಿಯ ಕೊಲೆ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದರು.

ADVERTISEMENT

ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹುಬ್ಬಳ್ಳಿಗೆ ಮತ್ತೊಂದು ಬಿಹಾರ ಎನ್ನುವ ಅಪಕೀರ್ತಿ ಬಂದಿದೆ. ರಾಜ್ಯದಲ್ಲಿ ಜನ ಇಂತಹ ಘಟನೆಗಳಿಂದ ಭಯಬೀತರಾಗಿದ್ದಾರೆ. ಯುವತಿಯರು, ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಹೇಳಿದರು.

ಈ ಪ್ರಕರಣದ ವಿಚಾರಣೆಗೆ ಸರ್ಕಾರ ತ್ವರಿತ ನ್ಯಾಯಾಲಯ ಸ್ಥಾಪಿಸಿ ಆರೋಪಿಗೆ ಶಿಕ್ಷೆ ಕೊಡಿಸಬೇಕು. ಅಂಜಲಿ ಅವರ ಸಹೋದರಿಯರ ಶಿಕ್ಷಣಕ್ಕೆ ಸರ್ಕಾರ ವ್ಯವಸ್ಥೆ ಮಾಡಬೇಕು, ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.