ADVERTISEMENT

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ: ಬಂಧಿತರ ಬಿಡುಗಡೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 16:16 IST
Last Updated 11 ಜುಲೈ 2023, 16:16 IST

ಹುಬ್ಬಳ್ಳಿ: ‘ಕಳೆದ ವರ್ಷ ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯಲ್ಲಿ ಬಂಧಿತರಾದ 156 ಜನರಲ್ಲಿ 148 ಮಂದಿ ಇನ್ನೂ ಜೈಲಿನಲ್ಲಿಯೇ ಇದ್ದಾರೆ. ಅವರನ್ನು ಬಿಡುಗಡೆ ಮಾಡಬೇಕು’ ಎಂದು ಮಾನವ ಹಕ್ಕು ಹೋರಾಟ ಸಮಿತಿಯು ಧಾರವಾಡ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದೆ.

‘2022ರ ಏಪ್ರಿಲ್ 16ರಂದು ನಡೆದ ಗಲಭೆಯಲ್ಲಿ ಬಂಧಿತರಾದವರ ಮೇಲೆ ದುರುದ್ದೇಶಪೂರ್ವಕವಾಗಿ ದೇಶದ್ರೋಹ ಕಾನೂನು ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಕಾನೂನು ದುರ್ಬಳಕೆ ಆಗುತ್ತಿದೆ. ಕಾನೂನು ತಿದ್ದುಪಡಿ ಮಾಡಬೇಕು ಹಾಗೂ ಜೈಲಿನಲ್ಲಿರುವವರನ್ನು ಶೀಘ್ರ ಬಿಡುಗಡೆ ಮಾಡಬೇಕು ಮನವಿಯಲ್ಲಿ ಒತ್ತಾಯಿಸಲಾಗಿದೆ’ ಎಂದು ಹೋರಾಟ ಸಮಿತಿ ಅಧ್ಯಕ್ಷ ಸುನೀಲ ಸಾಂಡ್ರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ದೇಶದ್ರೋಹ ಪ್ರಕರಣದ ಕಾರಣ 148 ಜನರ ಕುಟುಂಬಗಳು ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ತುಂಬಲಾರದ ನಷ್ಟ ಅನುಭವಿಸಿವೆ. ಸಮಾಜದಲ್ಲಿ ತಲೆ ಎತ್ತಿ ತಿರುಗಾಡದಂತೆ ಆಗಿದೆ’ ಎಂದು ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಕಾನೂನು ಸಚಿವರಿಗೆ ಬರೆದ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.