ADVERTISEMENT

ದಸರಾ: ಜಿಲ್ಲೆಯ ವೈಶಿಷ್ಟ್ಯ ಪ್ರತಿನಿಧಿಸುವ ಸ್ಥಬ್ದಚಿತ್ರ ನಿರ್ಮಾಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 16:06 IST
Last Updated 9 ಸೆಪ್ಟೆಂಬರ್ 2024, 16:06 IST
ಧಾರವಾಡದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ.ಮಾತನಾಡಿದರು
ಧಾರವಾಡದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ.ಮಾತನಾಡಿದರು   

ಧಾರವಾಡ: ‘ಪ್ರಸಕ್ತ ಸಾಲಿನ ಮೈಸೂರು ದಸರಾದಲ್ಲಿ ಅ.12ರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯ ಪರಂಪರೆ, ವೈಶಿಷ್ಟ್ಯಗಳನ್ನು ಪ್ರತಿನಿಧಿಸುವ ಸ್ಥಬ್ಧಚಿತ್ರವನ್ನು ರೂಪಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮೈಸೂರು ಜಂಬೂ ಸವಾರಿಗೆ ಸ್ಥಬ್ದಚಿತ್ರ ನಿರ್ಮಾಣ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅವರು ಮಾತನಾಡಿದರು.

‘ಜಂಬೂ ಸವಾರಿಯಲ್ಲಿ ಜಿಲ್ಲೆಯ ಇತಿಹಾಸ, ಪರಂಪರೆ, ಕಲೆ, ಸಂಗೀತ, ಸಾಹಿತ್ಯ ಹಾಗೂ ಅಭಿವೃದ್ಧಿಯ ಅಂಶಗಳನ್ನು ಬಿಂಬಿಸುವ ಸ್ಥಬ್ದಚಿತ್ರವನ್ನು ಪ್ರದರ್ಶಿಸಲಾಗುವುದು. ಈ ಕುರಿತು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು’ ಎಂದು ಸೂಚನೆ ನೀಡಿದರು.

ADVERTISEMENT

‘ಕೃಷಿ, ಕಾನೂನು, ಕರ್ನಾಟಕ ವಿಶ್ವವಿದ್ಯಾಲಯ, ಐಐಟಿ, ಐಐಐಟಿಗಳು ಜಿಲ್ಲೆಯ ಹೆಮ್ಮೆ ಸಂಕೇತವಾಗಿವೆ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿವೆ. ಅವುಗಳನ್ನು ಜನಸಾಮಾನ್ಯರಿಗೂ ಪರಿಚಯಿಸುವ ನಿಟ್ಟಿನಲ್ಲಿ ಸ್ಥಬ್ದಚಿತ್ರವನ್ನು ರೂಪಿಸಬೇಕು’ ಎಂದು ಹೇಳಿದರು.

ಯೋಜನಾ ನಿರ್ದೇಶಕಿ ರೇಖಾ ಡೊಳ್ಳಿನ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ರವಿ ಸಾಲಿಗೌಡರ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕಿ ಎಚ್.ಎಚ್. ಕುಕ್ಕನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಬಸವರಾಜ ಕುರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.