ADVERTISEMENT

ಸರ್ಕಾರದ ಸೌಲಭ್ಯ ಸಮರ್ಪಕ ಬಳಕೆಯಾಗಲಿ: ವೈ.ಜಿ.ಗದ್ದಿಗೌಡರ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2023, 5:33 IST
Last Updated 8 ಡಿಸೆಂಬರ್ 2023, 5:33 IST
ಅಣ್ಣಿಗೇರಿ ಆದಿಕವಿ ಪಂಪಸ್ಮಾರಕ ಭವನದಲ್ಲಿ ಹಮ್ಮಿಕೊಂಡ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ವಿಕಲಚೇತನರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಅಣ್ಣಿಗೇರಿ ಆದಿಕವಿ ಪಂಪಸ್ಮಾರಕ ಭವನದಲ್ಲಿ ಹಮ್ಮಿಕೊಂಡ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ವಿಕಲಚೇತನರಿಗೆ ಸನ್ಮಾನಿಸಿ ಗೌರವಿಸಲಾಯಿತು.   

ಅಣ್ಣಿಗೇರಿ: ಸಮಾಜದಲ್ಲಿ ಅಂಗವಿಕಲರು ತಮ್ಮ ಅಂಗವೈಕಲ್ಯ ಮೆಟ್ಟಿ ನಿಂತು ಸಮಾಜದ ಮುನ್ನಲೆಗೆ ತರುವ ದೃಷ್ಟಿಯಿಂದ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಜಿ.ಗದ್ದಿಗೌಡರ ಹೇಳಿದರು.

ಅವರು ಸ್ಥಳೀಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಅಂಗವಿಕಲರ ಆಶಾಕಿರಣ ಸಂಘದಿಂದ ಆಯೋಜಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸ್ಥಳೀಯ ಪುರಸಭೆಯಲ್ಲಿಯೂ ಕೂಡಾ ಅಂಗವಿಕಲರ ಶ್ರೇಯೋಭಿವೃದ್ದಿಗಾಗಿ ಅನುದಾನ  ಮೀಸಲಿಡಲಾಗಿದೆ. ಅಷ್ಠೇ ಅಲ್ಲದೇ ಸರ್ದಾರದಿಂದ ಪ್ರತಿವರ್ಷ ವಿವಿಧ ಯೋಜನೆ, ಸಲಕರಣೆ ಕೂಡಾ ಬರುತ್ತಿವೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಹಾಗೂ ಯೋಜನೆ  ತಲುಪಿಸುವುದರೊಂದಿಗೆ ಸಹಾಯ-ಸಹಕಾರವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ADVERTISEMENT

ಹುಬ್ಬಳ್ಳಿಯ ಇಕ್ವಿಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆನಂದ ಕುಮಾರ ಮಾತನಾಡಿ, ನಮ್ಮ ಸಂಸ್ಥೆ ಅಂಗವಿಕಲರಿಗಾಗಿಯೇ ಆರಂಭಗೊಂಡಿದೆ, ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವ ಮೂಲಕ ತಮ್ಮ ಜೀವನ ರೂಪಿಸಿಕೊಳ್ಳಬಹುದಾಗಿದೆ. ಇದರಲ್ಲಿ ಕಾರ್ಯನಿರ್ವಹಿಸಿದವರು ಮತ್ತು ತರಬೇತಿ ಪಡೆದ ಅಂಗವಿಕಲರು ವಿವಿಧ ರೀತಿಯಲ್ಲಿ ಉದ್ಯೋಗ ಮಾಡುವ ಮೂಲಕ ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದಾರೆ ಎಂದರು.

ಸಾನ್ನಿಧ್ಯ ವಹಿಸಿದ್ದ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ  ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳ ಅಂಗವಿಕಲರನ್ನು ಸನ್ಮಾನಿಸಲಾಯಿತು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಫಾತೀಮಾ ನವಲಗುಂದ, ಪುರಸಭೆ ಅಧ್ಯಕ್ಷೆ ಮೆಹಬೂಬಿ ನವಲಗುಂದ, ಜಯಲಕ್ಷ್ಮಿ ಜಕರಡ್ಡಿ, ಶಿವಾನಂದ ಬೆಳಹಾರ, ಬಸವಣ್ಣೆವ್ವ ದಿಡ್ಡಿ, ಲಲಿತಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.