ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ನ ನೂತನ ಪೊಲೀಸ್ ಕಮಿಷನರ್ ಆಗಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2011 ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ರೇಣುಕಾ ಅವರು ಈ ಹಿಂದೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಸದ್ಯ ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ರೇಣುಕಾ ಅವರು ಹು-ಧಾ ಕಮಿಷನರೇಟ್ ನ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.