ADVERTISEMENT

ಧಾರವಾಡ | ಜಿಲ್ಲಾಮಟ್ಟದ ಉದ್ಯೋಗಮೇಳ ಜೂನ್ 30ಕ್ಕೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2024, 15:57 IST
Last Updated 26 ಜೂನ್ 2024, 15:57 IST
ಎಸ್.ವಿ.ಸಂಕನೂರು
ಎಸ್.ವಿ.ಸಂಕನೂರು   

ಧಾರವಾಡ: ‘ಹುಬ್ಬಳ್ಳಿಯ ಉದ್ಯೋಗ ಮಾಹಿತಿ ಹಾಗೂ ತರಬೇತಿ ಕೇಂದ್ರ, ಕೌಶಲಾಭಿವೃದ್ಧಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನಗರದಲ್ಲಿ ಜೂನ್ 30 ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ತರಬೇತಿ ಕೇಂದ್ರದ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವಾಜಿ ವೃತ್ತದ ಬಳಿಯ ಕೆ.ಇ. ಬೋರ್ಡ್ ಪ್ರಥಮದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10.30ಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟನೆ ನೆರೆವೇರಿಸುವರು’ ಎಂದರು.

‘ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ ಮಸೂತಿ ಪಾಲ್ಗೊಳ್ಳುವರು. ಕೆ.ಇ. ಬೋರ್ಡ್ ಸಂಸ್ಥೆಯ ಕಾರ್ಯಾಧ್ಯಕ್ಷ ಎಸ್.ಟಿ. ಪಾಟೀಲ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.

ADVERTISEMENT

‘ಅಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ಎಂಟು ನೋಂದಣಿಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಕಾಲೇಜಿನ 18 ಕೊಠಡಿಗಳಲ್ಲಿ ಸಂದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.

‘ಉದ್ಯೋಗಮೇಳದಲ್ಲಿ ಬೆಂಗಳೂರು, ಪುನಾ, ಹೈದರಾಬಾದ್‌, ಕೇರಳ, ಬೆಳಗಾವಿಯ 51 ಕಂಪನಿಗಳು ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಶಿಕ್ಷಣ ಪೂರ್ಣಗೊಳಿಸಿದವರು ಪಾಲ್ಗೊಳ್ಳಬಹುದು. ಹೊರ ಜಿಲ್ಲೆಗಳ‌ ಅಭ್ಯರ್ಥಿಗಳೂ ಭಾಗವಹಿಸಬಹುದು‌’ ಎಂದರು.

ಕೆ.ಇ.ಬೋರ್ಡ್ ಸಂಸ್ಥೆ ಕಾರ್ಯದರ್ಶಿ ಡಿ.ಎಸ್. ರಾಜಪುರೋಹಿತ, ಪ್ರಾಚಾರ್ಯ ಮೋಹನ ಸಿದ್ಧಾಂತಿ, ಸುನೀತಾ ಪುರೋಹಿತ, ಎಸ್.ಎಲ್. ಶೇಖರಗೋಳ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.