ADVERTISEMENT

ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಘಟಿಕೋತ್ಸವ  ಮೇ 1ಕ್ಕೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 9:38 IST
Last Updated 30 ಏಪ್ರಿಲ್ 2022, 9:38 IST

ಹುಬ್ಬಳ್ಳಿ: ಇಲ್ಲಿನ ಕೆ.ಎಲ್.ಇ. ವಿಶ್ವವಿದ್ಯಾಲಯದ 2019-20 ಹಾಗೂ 2020-22 ನೇ ಸಾಲಿನ ಘಟಿಕೋತ್ಸವ ಮೇ 1 ರಂದು ವಿಶ್ವವಿದ್ಯಾಲಯದ ನೂತನ ಕ್ರೀಡಾ ಸಂಕೀರ್ಣದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಮುಖ್ಯ ಅತಿಥಿಯಾಗಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಡಾ.ಅನಿಲ್ ಸಹಸ್ರಬುದ್ಧೆ ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ವಿವಿ ಕುಲಪತಿ ಡಾ.ಅಶೋಕ ಶೆಟ್ಟರ್ ತಿಳಿಸಿದರು.

ವಿ.ವಿ.ಯಿಂದ ಮೊದಲ ಬಾರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದ್ದು, ಭಾರತ ಫೋರ್ಜ್ ಲಿಮಿಟೆಡ್ ಅಧ್ಯಕ್ಷ ಬಾಬಾಸಾಹೇಬ್ ಕಲ್ಯಾಣಿ ಅವರಿಗೆ ನೀಡಲಾಗುತ್ತಿದೆ.

ADVERTISEMENT

ಘಟಿಕೋತ್ಸವದಲ್ಲಿ ಉನ್ನತ ಸಾಧನೆ ಮಾಡಿದವರಿಗೆ 32 ಚಿನ್ನದ ಹಾಗೂ 32 ಬೆಳ್ಳಿ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. 2,509 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದರು.

ವಿ.ವಿ.ಯ ಕುಲಾಧಿಪತಿ ಪ್ರಭಾಕರ ಕೋರೆ ಆದ್ಯಕ್ಷತೆ ವಹಿಸಲಿದ್ದು, ಆಡಳಿತ ಮಂಡಳಿ ಅಧ್ಯಕ್ಷೆ ಸುಧಾಮೂರ್ತಿ ಉಪಸ್ಥಿತರಿರಲಿದ್ದಾರೆ ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.