ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣ ಬಾಜಪೇಯಿ ಅವರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾಕರಸಾಸಂ) ವ್ಯವಸ್ಥಾಪಕ ನಿರ್ದೇಶಕರಾಗಿ ಬುಧವಾರ ನೇಮಕಗೊಂಡಿದ್ದಾರೆ.
ಈ ಭಾಗದ ಸಾರಿಗೆ ಸಂಸ್ಥೆಯು ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಗಳನ್ನು ಒಳಗೊಂಡಿದೆ. ವಾಕರಸಾಸಂಗೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಚೋಳನ್ ಬಿಬಿಎಂಪಿ ಹಣಕಾಸು ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ವಿಶೇಷ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.