ADVERTISEMENT

ಕುಂದಗೋಳ | ವಿದ್ಯಾರ್ಥಿಗಳಿಗೆ ಬಯಲೇ ಶೌಚಾಲಯ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2024, 6:04 IST
Last Updated 12 ಫೆಬ್ರುವರಿ 2024, 6:04 IST

ಯರಗುಪ್ಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ನಿರ್ವಹಣೆಯಿಲ್ಲದೆ ಬಾಗಿಲು ಹಾಕಿರುವುದು

ಯರಗುಪ್ಪಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ನಿರ್ವಹಣೆಯಿಲ್ಲದೆ ಬಾಗಿಲು ಹಾಕಿರುವುದು

ಕುಂದಗೋಳ: ತಾಲ್ಲೂಕಿನ ಯರಗುಪ್ಪಿ ಗ್ರಾಮದ ಶಾಲಾ, ಕಾಲೇಜುಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ADVERTISEMENT

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲ. ಮಕ್ಕಳು ಮಲಮೂತ್ರ ವಿಸರ್ಜನೆಗೆ ಬಯಲನ್ನೇ ಅವಲಂಬಿಸಿದ್ದಾರೆ. ಶಾಲೆಯ ಎದುರಿನ ಚರಂಡಿಯಲ್ಲಿ ಸದಾ ನೀರು ನಿಂತಿರುತ್ತದೆ. ಮಕ್ಕಳು ಊಟದ ಪ್ಲೇಟು ತೊಳೆದ ನೀರು ಇದೇ ಚರಂಡಿ ಸೇರುತ್ತಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕುಡಿಯುವ ನೀರಿನ ಸೌಲಭ್ಯ ಇಲ್ಲ. ಮನೆಯಿಂದಲೇ ಬಾಟಲಿಗಳಲ್ಲಿ ನೀರನ್ನು ತಂದು ಕುಡಿಯುವ ಸ್ಥಿತಿ ಇದೆ. ನೀರು ಖಾಲಿಯಾದರೆ ಶಾಲೆಯ ಅಕ್ಕಪಕ್ಕದ ಕಿರಾಣಿ ಅಂಗಡಿ, ಹೋಟೆಲ್‍ಗಳಿಗೆ ತೆರಳಿ ನೀರು ಕುಡಿಯಬೇಕಾದ ಸ್ಥಿತಿ ಎದುರಾಗಿದೆ.

ಗ್ರಾಮದ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಇದೆ.

‘ಗ್ರಾಮದ ಕೆಲವು ಕಿಡಿಗೇಡಿಗಳು ಶೌಚಾಲಯದ ಬಾಗಿಲು ಮುರಿದಿದ್ದಾರೆ. ಹೀಗಾಗಿ ಶೌಚಾಲಯ ಉಪಯೋಗಕ್ಕೆ ಬಾರದಂತಾಗಿದೆ. ಶಾಲೆಯ ಸುತ್ತ ಸಿ.ಸಿ ಕ್ಯಾಮೆರಾ ಅಳವಡಿಸಬೇಕು’ ಎಂದು ಶಿಕ್ಷಕರೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.