ADVERTISEMENT

ಉದ್ಯೋಗ ಖಾತ್ರಿ ಅನುದಾನ ಶೇ 18 ಕಡಿತಗೊಳಿಸಿದ ಕೇಂದ್ರ ಸರ್ಕಾರ: ಸಂತೋಷ್‌ ಲಾಡ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 13:04 IST
Last Updated 24 ನವೆಂಬರ್ 2023, 13:04 IST
ಸಂತೋಷ್‌ ಲಾಡ್‌
ಸಂತೋಷ್‌ ಲಾಡ್‌   

ಧಾರವಾಡ: ‘ಉದ್ಯೋಗ ಖಾತ್ರಿ ಜಾಬ್‌ ಕಾರ್ಡ್‌ದಾರರ ಸಂಖ್ಯೆ ಹೆಚ್ಚಳವಾಗಿದ್ದರೂ ಈ ವರ್ಷ ಉದ್ಯೋಗ ಖಾತ್ರಿ (ನರೇಗಾ) ಅನುದಾನವನ್ನು ಶೇ 18 ಕಡಿತ ಮಾಡಿದೆ, ಕೇಂದ್ರ ಸರ್ಕಾರವನ್ನು ಕೇಳುವವರು ಇಲ್ಲ’ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ದೂರಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ 20 ಕೋಟಿ ಜನರು ಉದ್ಯೋಗ ಖಾತ್ರಿ ಯೋಜನೆಯನ್ನು (ನರೇಗಾ) ಅವಲಂಬಿಸಿದ್ದಾರೆ. ಪ್ರತಿ ವರ್ಷ ನರೇಗಾ ಅನುದಾನವನ್ನು ಹೆಚ್ಚಳ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಕಡಿಮೆಮಾಡಲಾಗಿದೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ನರೇಗಾ ವಿರುದ್ಧ ಮಾತನಾಡಿದ್ದರು. ಅವರಿಗೆ ಈ ಯೋಜನೆಗೆ ಬಗ್ಗೆ ಆಸಕ್ತಿ ಇಲ್ಲ’ ಎಂದು ಕುಟುಕಿದರು.

ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದ ಆದೇಶವನ್ನು ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ಸಭೆ ಕೈಗೊಂಡಿರುವ ನಿರ್ಧಾರಕ್ಕೆ ಬದ್ಧ ಇದ್ದೇನೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.