ADVERTISEMENT

‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0’ ಆರಂಭ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 16:12 IST
Last Updated 8 ನವೆಂಬರ್ 2024, 16:12 IST

ಹುಬ್ಬಳ್ಳಿ: ನೈರುತ್ಯ ರೈಲ್ವೆಯು ತನ್ನ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಜೀವನ ಪ್ರಮಾಣಪತ್ರ) ಸಲ್ಲಿಕೆ ಪ್ರಕ್ರಿಯೆ ಸುಗಮಗೊಳಿಸಲು ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0’ ಆರಂಭಿಸಿದೆ.

ಈ ಹೊಸ ಡಿಜಿಟಲ್ ಅಭಿಯಾನದ ಮೂಲಕ ಪಿಂಚಣಿದಾರರು ಮನೆಯಿಂದಲೇ ಜೀವನ ಪ್ರಮಾಣಪತ್ರ ಸಲ್ಲಿಸಬಹುದು. ಪಿಂಚಣಿದಾರರು ಆ್ಯಂಡ್ರಾಯ್ಡ್‌ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಧಾರ್ ಫೇಸ್ ಆರ್‌ಡಿ ಅಪ್ಲಿಕೇಶನ್ ಹಾಗೂ ಜೀವನ್ ಪ್ರಮಾಣ್‌ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಜೀವನ ಪ್ರಮಾಣಪತ್ರಗಳನ್ನು ಮನೆಯಿಂದಲೇ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT