ADVERTISEMENT

ಬಿಜೆಪಿಗರು ಆತ್ಮಾವಲೋಕನ ಮಾಡಿಕೊಳ್ಳಲಿ: ಶಾಸಕ ಅಬ್ಬಯ್ಯ

-

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 16:00 IST
Last Updated 22 ಫೆಬ್ರುವರಿ 2024, 16:00 IST
ಪ್ರಸಾದ ಅಬ್ಬಯ್ಯ
ಪ್ರಸಾದ ಅಬ್ಬಯ್ಯ   

ಹುಬ್ಬಳ್ಳಿ: ‘ರಾಜ್ಯ ಕಾಂಗ್ರೆಸ್‌ ಸರ್ಕಾರ ಪ್ರಸ್ತುತ ಬಜೆಟ್‌ನಲ್ಲಿ ಏನೂ ನೀಡಿಲ್ಲ ಎಂಬು ಬೊಬ್ಬೆ ಹೊಡೆಯುವ ಮೊದಲು ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಏನು ನೀಡಿತ್ತು ಎಂಬುದನ್ನು ಮೊದಲು ಬಿಜೆಯವರು ಆತ್ಮಾವಲೋಕನ ಮಾಡಿಕೊಂಡರೆ ಒಳ್ಳೆಯದು’ ಎಂದು ಶಾಸಕ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಅವರು ಸದನದಲ್ಲಿ ಹೇಳಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಮೇಲಿನ ಭಾಷಣದ ವೇಳೆ ಮಾತನಾಡಿದ ಅವರು, ’ಹಿಂದಿನ ಬಿಜೆಪಿ ಸರ್ಕಾರ ಹಾಗೂ ಪ್ರಸ್ತುತ ಕಾಂಗ್ರೆಸ್‌ ಸರ್ಕಾರವು ಶಿಕ್ಷಣ, ಆರೋಗ್ಯ, ಒಳಾಡಳಿತ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹೀಗೆ ವಿವಿಧ ಇಲಾಖೆಗಳಿಗೆ ನೀಡಿದ ಅನುದಾನದ ಅಂಕಿಅಂಶಗಳ ಸಮೇತ ಪ್ರಸ್ತಾಪಿಸಿ, ನಮ್ಮ ಸರ್ಕಾರ ಬಜೆಟ್‌ನಲ್ಲಿ ಏನೂ ನೀಡಿಲ್ಲ’ ಎಂದು ಅಪಪ್ರಚಾರ ಮಾಡುವ ಬಿಜೆಪಿ ಶಾಸಕರು ಒಮ್ಮೆ ಪರಿಶೀಲಿಸಿಕೊಳ್ಳಲಿ’ ಎಂದರು. 

ಗ್ಯಾರಂಟಿ ಯೋಜನೆಗಳಿಗೂ ಅಗತ್ಯ ಅನುದಾನ ಮೀಸಲಿಟ್ಟಿರುವುದು ಶ್ಲಾಘನೀಯವಾಗಿದೆ ಎಂದರು. 

ADVERTISEMENT

ಹುಬ್ಬಳ್ಳಿ ನಗರಕ್ಕೆ ಒಂದು ಸರ್ಕಾರಿ ಕಾಲೇಜು ಮತ್ತು ಪೂರ್ವ ಕ್ಷೇತ್ರಕ್ಕೆ ಪಿಯು ಕಾಲೇಜು ಅವಶ್ಯಕತೆ ಇದೆ. ಅದರಂತೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ಆರ್ಥಿಕ ದಿವಾಳಿಯಿಂದ ಬಳಲುತ್ತಿದ್ದು, ಪಿಂಚಣಿ, ವೇತನಕ್ಕೂ ಹಣವಿಲ್ಲದೆ ಪರದಾಡುವಂತಾಗಿದೆ. ಹಿಂದೆ ಇದ್ದ ದೂರ ಶಿಕ್ಷಣವನ್ನು ಮತ್ತೆ ಪ್ರಾರಂಭಿಸಬೇಕು. ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.