ಹುಬ್ಬಳ್ಳಿ: ‘ಲೋಕಾಯುಕ್ತರ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಮಾತನಾಡುವ ಮೂಲಕ ವಿರೋಧ ಪಕ್ಷದ ನಾಯಕ ಆರ್.ಅಶೋಕ ನ್ಯಾಯಾಲಯಕ್ಕೆ ಹಾಗೂ ನ್ಯಾಯಪೀಠಗಳಿಗೆ ಅವಮಾನಿಸಿದ್ದಾರೆ. ಅವರ ವಿರುದ್ಧ ಲೋಕಾಯುಕ್ತರು ಕ್ರಮ ಕೈಗೊಳ್ಳಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.
‘ಲೋಕಾಯುಕ್ತ ಹುದ್ದೆಯು ಸಾಂವಿಧಾನಿಕ ಹುದ್ದೆ. ಅವರ ಬಗ್ಗೆ ಈ ರೀತಿ ಮಾತನಾಡಿರುವುದು ಖಂಡನೀಯ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತರ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಸಂಸ್ಥೆಗೆ ಗೌರವ ಕೊಟ್ಟು ಮುಖ್ಯಮಂತ್ರಿ ಅವರು ವಿಚಾರಣೆ ಎದುರಿಸಿ ಬಂದಿದ್ದಾರೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಇಂತಹ ಗೌರವಾನ್ವಿತ ಮುಖ್ಯಮಂತ್ರಿ ಇದ್ದಾರೆ ಎಂದು ನಾವು ಖುಷಿ ಪಡಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.