ADVERTISEMENT

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 16:11 IST
Last Updated 5 ಜುಲೈ 2024, 16:11 IST
ರವಿಕೃಷ್ಣಾರೆಡ್ಡಿ
ರವಿಕೃಷ್ಣಾರೆಡ್ಡಿ   

ಹುಬ್ಬಳ್ಳಿ: ‘ಜಾತ್ಯತೀತ, ಸಮಾಜವಾದದ ಸೋಗು ಹಾಕಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆಗ್ರಹಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಮುಂಚೂಣಿಗೆ ಬಂದಿದೆ. ಈ ಹಗರಣವನ್ನು ಸಿಬಿಐಯಿಂದ ಪೂರ್ಣಪ್ರಮಾಣದಲ್ಲಿ ತನಿಖೆ ನಡೆಸಬೇಕು’ ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹಗರಣದ ಕುರಿತು ಪೂರ್ಣಪ್ರಮಾಣದ ತನಿಖೆ ನಡೆಸುವಂತೆ ಒತ್ತಾಯಿಸಿ ಜುಲೈ 10ರಂದು ಮುಡಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಲಾಗುವುದು’ ಎಂದರು.

ADVERTISEMENT

‘ಮುಡಾದಿಂದ 10 ವರ್ಷಗಳ ಅವಧಿಯಲ್ಲಿ ಪಡೆದಿರುವ ನಿವೇಶನಗಳನ್ನು ರದ್ದುಗೊಳಿಸಬೇಕು. ಅರ್ಹರಿಗೆ ನೀಡಬೇಕು. ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಬೇಕು’ ಎಂದು ಅವರು ಆಗ್ರಹಿಸಿದರು.

‘ಸಿದ್ದರಾಮಯ್ಯನವರ ರಕ್ಷಣೆಗೆ ಬಿಜೆಪಿ ಉನ್ನತ ನಾಯಕರು ಕೈಜೋಡಿಸಿದ್ದಾರೆ. ಒಳಒಪ್ಪಂದದಿಂದ ಅವರ ಮೇಲಿನ ಯಾವುದೇ ಹಗರಣವನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಿಲ್ಲ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.