ADVERTISEMENT

ಮಹಾನಗರ ಪಾಲಿಕೆ ಅಧಿಕಾರಿಗಳ ದಾಳಿ 15 ಟನ್‌ಗೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 8:34 IST
Last Updated 2 ಜುಲೈ 2024, 8:34 IST
<div class="paragraphs"><p>15 ಟನ್‌ಗೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶ</p></div>

15 ಟನ್‌ಗೂ ಹೆಚ್ಚು ನಿಷೇಧಿತ ಪ್ಲಾಸ್ಟಿಕ್ ವಶ

   

ಹುಬ್ಬಳ್ಳಿ: ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ನೇತೃತ್ವದಲ್ಲಿ ಪ್ಲಾಸ್ಟಿಕ್ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 15 ಟನ್ ಗಿಂತ ಹೆಚ್ಚು ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು‌.

ಇಲ್ಲಿನ ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದ ಮೊದಲ ಹಂತದಲ್ಲಿರುವ ರಜನಿ ಪಾಲಿಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಂಪನಿ ಮೇಲೆ ದಾಳಿ ನಡೆಸಲಾಯಿತು.

ADVERTISEMENT

ಈ ಕಂಪನಿ 2011ರಲ್ಲಿ ಆರಂಭವಾಗಿದ್ದು, ಖಚಿತ ಮಾಹಿತಿ ಆಧರಿಸಿ ದಾಳಿ‌ ನಡೆಸಲಾಯಿತು. ಕಂಪನಿಯಲ್ಲಿ 30-35 ಮೈಕ್ರಾನ್ ನ ಏಕಬಳಕೆಯ ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮಾಡಲಾಗುತ್ತಿತ್ತು ಎಂದು ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹೇಳಿದರು.

ಕಂಪನಿಯ ಟ್ರೇಡ್ ಲೈಸನ್ಸ್ ರದ್ದು ಪಡಿಸಲು ಅವಕಾಶ ಇದ್ದು, ಈ ಬಗ್ಗೆ ಕೈಗಾರಿಕಾ ಇಲಾಖೆಗೆ ಪತ್ರ ಬರೆಯಲಾಗುವುದು. ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪಾದನೆ ಪತ್ತೆಗೆ ವಿಶೇಷ ತಂಡ ರಚಿಸಿ, ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.