ADVERTISEMENT

‘ಗ್ಯಾರಂಟಿ’ ಫಲಾನುಭವಿಗಳಿಗೆ ತಲುಪಿಲ್ಲ: ನಿರಾಣಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 0:00 IST
Last Updated 26 ಅಕ್ಟೋಬರ್ 2024, 0:00 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಹುಬ್ಬಳ್ಳಿ: ‘ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ. ಸರ್ಕಾರದಿಂದ ಯಾವ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ಹೀಗಾಗಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರುವರು’ ಎಂದು ಬಿಜೆಪಿ ಮುಖಂಡ ಮುರಗೇಶ ನಿರಾಣಿ ತಿಳಿಸಿದರು.

‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಭ್ರಮನಿರಸನವಾಗಿದೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಮತದಾರರು ಬಿಜೆಪಿ ಪರವಾಗಿದ್ದು, ಬಸವರಾಜ ಬೊಮ್ಮಾಯಿ ಅವರ ಆಡಳಿತ ವೈಖರಿ ಒಪ್ಪಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT