ADVERTISEMENT

ರಾಷ್ಟ್ರೀಯ ವಿಧಿವಿಜ್ಞಾನ ವಿವಿ ಕ್ಯಾಂಪಸ್‌

ಜ. 28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 5:40 IST
Last Updated 23 ಜನವರಿ 2023, 5:40 IST
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣಕ್ಕೆ ಭಾನುವಾರ ಭೇಟಿ ನೀಡಿದ ಪ್ರಲ್ಹಾದ ಜೋಶಿ ಅವರಿಗೆ ಕುಲಪತಿ ಪ್ರೊ. ಕೆ.ಬಿ.ಗುಡಸಿ ಅವರು ಜಾಗವನ್ನು ತೋರಿಸಿದರು. ಅರವಿಂದ ಬೆಲ್ಲದ, ಅಮೃತ ದೇಸಾಯಿ, ಈರೇಶ ಅಂಚಟಗೇರಿ ಇದ್ದಾರೆ
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣಕ್ಕೆ ಭಾನುವಾರ ಭೇಟಿ ನೀಡಿದ ಪ್ರಲ್ಹಾದ ಜೋಶಿ ಅವರಿಗೆ ಕುಲಪತಿ ಪ್ರೊ. ಕೆ.ಬಿ.ಗುಡಸಿ ಅವರು ಜಾಗವನ್ನು ತೋರಿಸಿದರು. ಅರವಿಂದ ಬೆಲ್ಲದ, ಅಮೃತ ದೇಸಾಯಿ, ಈರೇಶ ಅಂಚಟಗೇರಿ ಇದ್ದಾರೆ   

ಧಾರವಾಡ: ‘ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ 9ನೇ ಕ್ಯಾಂಪಸ್‌ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಜ. 28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ಗುಜರಾತ್‌ನ ಗಾಂಧೀನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವಿದ್ದು, ಅದರ 8 ಕ್ಯಾಂಪಸ್‌ಗಳು ವಿವಿಧ ರಾಜ್ಯಗಳಲ್ಲಿವೆ. 9ನೇ ಕ್ಯಾಂಪಸ್‌ ಆಗಿ ಧಾರವಾಡದಲ್ಲಿ ಸ್ಥಾಪನೆಯಾಗಲಿರುವ ನೂತನ ಕ್ಯಾಂಪಸ್ ದಕ್ಷಿಣ ಭಾರತದಲ್ಲೇ ಮೊದಲನೆಯದಾಗಲಿದೆ’ ಎಂದರು.

‘ಕ್ಯಾಂಪಸ್ ನಿರ್ಮಾಣಕ್ಕೆ ಸುಮಾರು 50 ಎಕರೆ ಜಾಗದ ಅಗತ್ಯವಿದೆ. ಅತ್ಯಾಧುನಿಕ ಸೌಲಭ್ಯ ಹೊಂದಿರುವ ಪ್ರಯೋಗಾಲಯ, ಆಡಳಿತ ಭವನ, ತರಗತಿ ಕೊಠಡಿ, ವಿದ್ಯಾರ್ಥಿ ನಿಲಯ, ಸಿಬ್ಬಂದಿಗಳ ವಸತಿ ಸಮುಚ್ಚಯ ಮುಂತಾದ ಮೂಲಸೌಕರ್ಯಗಳು ಇಲ್ಲಿರಲಿವೆ. ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಜಾಗಗಳನ್ನು ಪರಿಶೀಲಿಸಲಾಗಿದೆ. ಇವುಗಳಲ್ಲಿ ಸೂಕ್ತವಾದ ಒಂದು ಜಾಗವನ್ನು ಆಯ್ಕೆ ಮಾಡಿಕೊಳ್ಳಲಾಗುವುದು’ ಎಂದರು.

ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಕರ್ನಾಟಕ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವನಪ್ಪ ಅಷ್ಟಗಿ, ಕರ್ನಾಟಕ ಅರಣ್ಯ ವಸತಿ ಮತ್ತು ಅರಣ್ಯ ಧಾಮಗಳ ಸಂಸ್ಥೆ ಅಧ್ಯಕ್ಷ ರಾಜು ಕೋಟೆನ್ನವರ, ಮಹಾನಗರ ಮೇಯರ್ ಈರೇಶ ಅಂಚಟಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.