ADVERTISEMENT

ನವರಾತ್ರಿ: ದೇವಿಗೆ ಅಲಂಕಾರ, ಪೂಜೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2024, 16:04 IST
Last Updated 6 ಅಕ್ಟೋಬರ್ 2024, 16:04 IST
ಹುಬ್ಬಳ್ಳಿಯ ದಾಜಿಬಾನ ಪೇಟೆಯ ದುರ್ಗಾದೇವಿ ದೇವಸ್ಥಾನಕ್ಕೆ ಶಿಲ್ಪಾ ಜಗದೀಶ ಶೆಟ್ಟರ್ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು
ಹುಬ್ಬಳ್ಳಿಯ ದಾಜಿಬಾನ ಪೇಟೆಯ ದುರ್ಗಾದೇವಿ ದೇವಸ್ಥಾನಕ್ಕೆ ಶಿಲ್ಪಾ ಜಗದೀಶ ಶೆಟ್ಟರ್ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು   

ಹುಬ್ಬಳ್ಳಿ: ನವರಾತ್ರಿ ಅಂಗವಾಗಿ ನಗರದ ವಿವಿಧ ದೇವಸ್ಥಾನಗಳಲ್ಲಿ ಭಾನುವಾರ ನಾಲ್ಕನೇ ದಿನದ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. 

ಎಂದಿನಂತೆ ಮಹಿಳೆಯರು, ಮಕ್ಕಳು ಬೆಳಿಗ್ಗೆಯೇ ದೇಗುಲಗಳಿಗೆ ತೆರಳಿ, ದೇವಿಗೆ ಹಾಗೂ ಬನ್ನಿಕಟ್ಟೆಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. 

ಇಲ್ಲಿನ ದಾಜಿಬಾನ ಪೇಟೆಯ ದುರ್ಗಾದೇವಿ ದೇವಸ್ಥಾನಕ್ಕೆ ಶಿಲ್ಪಾ ಜಗದೀಶ ಶೆಟ್ಟರ್ ಭೇಟಿ ನೀಡಿ, ದ್ಯಾಮವ್ವದೇವಿ ಹಾಗೂ ದುರ್ಗಾದೇವಿಗೆ ರೇಷ್ಮೆ ಸೀರೆ ಸೇವೆ, ಹಣ್ಣು ಹಂಪಲದ ಭಕ್ತಿ ಸೇವೆ ಸಲ್ಲಿಸಿದರು.

ADVERTISEMENT

ಉಣಕಲ್‌ನ ವರಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಮಹಿಳಾ ಮಂಡಳದ ಅಧ್ಯಕ್ಷೆ ಅನ್ನಪೂರ್ಣ ಪಾಟೀಲ ಮತ್ತು ಪದಾಧಿಕಾರಿಗಳು ದೇವಿಗೆ ಪೂಜೆ ಸಲ್ಲಿಸಿದರು. ದೇಶಪಾಂಡೆ ನಗರದ ಕಾಮಾಕ್ಷಿ ದೇವಸ್ಥಾನದಲ್ಲಿ ದೇವಿಗೆ ಕನ್ಯಾಕುಮಾರಿ ದೇವಿಯ ಅಲಂಕಾರ ಮಾಡಲಾಗಿತ್ತು.

ಪ್ರಕೃತಿ ಕಲ್ಚರಲ್‌ ಮತ್ತು ಸ್ಪೋರ್ಟ್ಸ್‌ ಫೌಂಡೇಷನ್‌ ವತಿಯಿಂದ ಆಯೋಜಿಸಿದ್ದ ಗರ್ಭಾ (ದಾಂಡಿಯಾ) ಉತ್ಸವಗಳಲ್ಲಿ ಜನರು ಪಾಲ್ಗೊಂಡು, ನೃತ್ಯ ಮಾಡಿ ಸಂಭ್ರಮಿಸಿದರು. 

ಹುಬ್ಬಳ್ಳಿಯ ದೇಶಪಾಂಡೆ ನಗರದ ಕಾಮಾಕ್ಷಿ ದೇವಸ್ಥಾನದಲ್ಲಿ ದೇವಿಗೆ ಕನ್ಯಾಕುಮಾರಿದೇವಿಯ ಅಲಂಕಾರ ಮಾಡಲಾಗಿತ್ತು
ಹುಬ್ಬಳ್ಳಿಯ ದಾಜಿಬಾನ್‌ ಪೇಟೆಯ ದುರ್ಗಾದೇವಿ ದೇವಸ್ಥಾನದಲ್ಲಿ ಭಾನುವಾರ ಪಂತಜಲಿ ಯೋಗ ಶಿಕ್ಷಣ  ಸಮಿತಿ ಕರ್ನಾಟಕ ಹುಬ್ಬಳ್ಳಿ ಶಾಖೆ ಯೋಗ ಸ್ಪರ್ಶ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ದುರ್ಗಾ ನಮಸ್ಕಾರ ಕಾರ್ಯಕ್ರಮ ಜರುಗಿತು
ಹಳೇ ಹುಬ್ಬಳ್ಳಿಯ ಮೇದಾರ್ ಓಣಿಯ ಏಳು ಮಕ್ಕಳ ತಾಯಮ್ಮ ದೇವಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.