ADVERTISEMENT

ಹುಬ್ಬಳ್ಳಿ | ನೇಹಾ ಕೊಲೆ ಪ್ರಕರಣ: ಮತ್ತೆ ಇಬ್ಬರ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2024, 15:20 IST
Last Updated 14 ಮೇ 2024, 15:20 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು, ಎರಡು ದಿನಗಳ ಹಿಂದೆ ಹೋಟೆಲೊಂದರ ಮಾಲೀಕ ಸೇರಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

‘ಕೊಲೆ ಸಂಚಿನಲ್ಲಿ ನಾಲ್ಕು ಜನರ ಕೈವಾಡವಿದೆ. ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ’ ಎಂದು ನೇಹಾ ತಂದೆ ನಿರಂಜನಯ್ಯ ಸಾಕಷ್ಟು  ಬಾರಿ ಆರೋಪಿಸಿದ್ದರು. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಪೊಲೀಸರು, ಇದೀಗ ತಂದೆಯ ಹೇಳಿಕೆಯಂತೆ ಇಬ್ಬರನ್ನು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ADVERTISEMENT

ಪ್ರಕರಣದ ಆರಂಭದಲ್ಲಿ ಸ್ಥಳೀಯ ವಿದ್ಯಾನಗರ ಠಾಣೆ ಪೊಲೀಸರು ಶೇ 60ರಷ್ಟು ತನಿಖೆ ಪೂರ್ಣಗೊಳಿಸಿದ್ದರು. ರಾಜ್ಯದಾದ್ಯಂತ ಒತ್ತಡಗಳು ಬಂದಾಗ, ಸರ್ಕಾರ ಅದನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಸಿಐಡಿ ಪೊಲೀಸರು ಆರೋಪಿ ಫಯಾಜ್‌, ಅವನ ತಂದೆ–ತಾಯಿ, ಸ್ನೇಹಿತರು, ಪರಿಚಯಸ್ಥರು, ನೇಹಾ ತಂದೆ–ತಾಯಿ ಹಾಗೂ ಅನುಮಾನ ಬಂದ ಕೆಲವು ವ್ಯಕ್ತಿಗಳನ್ನು ಸಹ ವಿಚಾರಣೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

‘ಸಿಐಡಿ ಪೊಲೀಸರು ಕೆಲವು ಸಾಕ್ಷಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು, ವರದಿಗಾಗಿ  ಕಾಯುತ್ತಿದ್ದಾರೆ. 90 ದಿನಗಳಲ್ಲಿ ತನಿಖೆಯ ದೋಷಾರೋಪ ಪಟ್ಟಿಯನ್ನು, ಸೂಕ್ತ ಸಾಕ್ಷ್ಯಾಧಾರಗಳೊಂದಿಗೆ ಕೋರ್ಟ್‌ ಸಲ್ಲಿಕೆ ಮಾಡಬೇಕು ಎನ್ನುವ ನಿಯಮವಿದೆ. ಆದ್ಯತೆ ಮೇರೆಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಐಡಿ, ಶೀಘ್ರದಲ್ಲಿಯೇ ಕೋರ್ಟ್‌ಗೆ ವರದಿ ಸಲ್ಲಿಸಲು ಮುಂದಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.