ಹುಬ್ಬಳ್ಳಿ: 'ನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆಯನ್ನು ಸಮಾಜದಲ್ಲಿರುವ ಎಲ್ಲರೂ ಖಂಡಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು' ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ.
'ಕಾಲೇಜಿನ ಆವರಣದಲ್ಲಿ ಇಂಥ ಪರಿಸ್ಥಿತಿಗಳು ನಿರ್ಮಾಣವಾದರೆ ಹೆಣ್ಣು ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಪಾಲಮರು ಕಳುಹಿಸುವುದು ಕಷ್ಟವಾಗುತ್ತದೆ. ನಾವೆಲ್ಲರು ಜಾಗೃತರಾಗಬೇಕು. ಇಂಥ ದುಷ್ಕೃತ್ಯ ನಡೆದಾಗಲೂ ಕಣ್ಮುಚ್ಚಿ ಕುಳಿತುಕೊಳ್ಳುವುದು ನ್ಯಾಯವಲ್ಲ. ಜಾತಿ, ಮತ, ಪಂಥ ಮರತು ಒಗ್ಗಟ್ಟಿನಿಂದ ಖಂಡಿಸಬೇಕು. ಆರೋಪಿಗೆ ಗಲ್ಲು ಶಿಕ್ಷೆಯಾದಾಗ ಮಾತ್ರ ನೇಹಾ ಸಾವಿಗೆ ನ್ಯಾಯ ಸಿಕ್ಕಂತಾಗುತ್ತದೆ' ಎಂದು ತಿಳಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.