ADVERTISEMENT

ನೇಹಾ ಕೊಲೆ ಪ್ರಕರಣ: ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ; ಮಾಹಿತಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 11:38 IST
Last Updated 21 ಏಪ್ರಿಲ್ 2024, 11:38 IST
<div class="paragraphs"><p>ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ನೇಹಾ ಹಿರೇಮಠ ನಿವಾಸಕ್ಕೆ ಭಾನುವಾರ ಭೇಟಿ ನೀಡಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.</p></div>

ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ನೇಹಾ ಹಿರೇಮಠ ನಿವಾಸಕ್ಕೆ ಭಾನುವಾರ ಭೇಟಿ ನೀಡಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

   

ಹುಬ್ಬಳ್ಳಿ: ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ನಗರದ ಬಿಡ್ನಾಳದಲ್ಲಿರುವ ಮೃತ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ನೇಹಾಳ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಜೊತೆ ಚರ್ಚಿಸಿದರು. ಘಟನೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಪೊಲೀಸರ ಸಹಕಾರ ಹಾಗೂ ಪ್ರಕರಣದ ತನಿಖೆಯಲ್ಲಿ ಅವರಿಗೆ ನೀಡಿರುವ ಮಾಹಿತಿಯನ್ನು ಸಂಗ್ರಹಿಸಿದರು. ನೇಹಾಳ ಸಾವಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು.

ADVERTISEMENT

ನೇಹಾ ನಿವಾಸಕ್ಕೂ ತೆರಳುವ ಮುನ್ನ, ನಾಗಲಕ್ಷ್ಮಿ ಅವರು, ನಗರದ ಪ್ರವಾಸಿ ಮಂದಿರದಲ್ಲಿ ಕಮಿಷನರ್ ರೇಣುಕಾ ಸುಕುಮಾರ್ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ, ಆರೋಪಿ ಫಯಾಜ್ ಹಿನ್ನೆಲೆ ಹಾಗೂ ಸದ್ಯದ ಬೆಳವಣಿಗೆಯ ಕುರಿತು ಮಾಹಿತಿ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.