ನವಲಗುಂದ: ರೈತ ಬಂಡಾಯದ ನೆಲದಿಂದ ವಿಧಾನಸಭೆಗೆ ಎರಡನೇ ಬಾರಿಗೆ ಶಾಸಕ ಸ್ಥಾನಕ್ಕೆ ಆಯ್ಕೆಯಾದ ಎನ್.ಎಚ್.ಕೋನರಡ್ಡಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಪ್ರವೇಶಿಸಿ ಗಮ ಸೆಳೆದರು.
ಸತತ ತಮ್ಮ ರೈತ ಹೋರಾಟದ ಮೂಲಕ ಜಿಲ್ಲೆಯಲ್ಲಿ ವಿಶಿಷ್ಟ ರಾಜಕಾರಣಿಯಾಗಿ ಗುರುತಿಸಿಕೊಂಡ ಕೋನರಡ್ಡಿ ಪ್ರಭಾವಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದರು. ಈ ಹಿಂದೆ ಜೆಡಿಎಸ್‌ನಿಂದ ಆಯ್ಕೆ ಅನೇಕ ರೈತರ ಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತ ಮತದಾರರ ಮನ ಗೆದ್ದಿದ್ದರು.
‘ವಿಧಾನಸಭೆ ದೇವಸ್ಥಾನವಿದ್ದಂತೆ. ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುವ ವೇದಿಕೆ. ಅಂತಹ ಪವಿತ್ರ ಸ್ಥಳಕ್ಕೆ ನಮಸ್ಕರಿಸಿ ಹೋಗುವುದು ಸಂತಸ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ವಿಧಾಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ. ರಚನಾತ್ಮಕ ಚರ್ಚೆಗಳ ಮೂಲಕ ತಾಲ್ಲೂಕಿನ ಸಮಸ್ಯೆಗೆ ಸ್ಪಂದಿಸುವುದಾಗಿ’ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.