ADVERTISEMENT

ಹುಬ್ಬಳ್ಳಿ– ಧಾರವಾಡ ಓಲಾ ಚಾಲಕರ ಸಂಘ ಅಸ್ತಿತ್ವಕ್ಕೆ, ಮಹೇಶ್ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2018, 12:12 IST
Last Updated 25 ಸೆಪ್ಟೆಂಬರ್ 2018, 12:12 IST

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಓಲಾ ಟ್ಯಾಕ್ಸಿ ಚಾಲಕರ ಸಂಘ ‘ಮಿತ್ರ ಬಳಗ ಚಾಲಕರ ಸಂಘ’ ಅಸ್ತಿತ್ವಕ್ಕೆ ಬಂದಿದ್ದು, ಮೊದಲ ಅಧ್ಯಕ್ಷರಾಗಿ ಮಹೇಶ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿವು ಅಪ್ಪಾಜಿ ಹಾಗೂ ಖಜಾಂಚಿಯಾಗಿ ಪ್ರಮೋದ್ ಆಯ್ಕೆಯಾಗಿದ್ದಾರೆ.

‘ಅವಳಿ ನಗರದಲ್ಲಿ ಸಂಚರಿಸಲು ಇರುವ ಅಡೆತಡೆ ಇನ್ನೂ ಬಗೆಹರಿದಿಲ್ಲ. ಈ ಬಗ್ಗೆ ಕಂಪನಿಗೆ ಈಗಾಗಲೇ ಮನವಿ ಮಾಡಲಾಗಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ. ಕಂಪನಿಯಿಂದ ದಾಖಲೆಗಳು ಇನ್ನೂ ಸಲ್ಲಿಕೆಯಾಗಿಲ್ಲ ಎಂದು ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾದರೆ ಸಂಘಟನೆ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾದ ಕಾರಣ, ಸಂಘ ರಚಿಸಿ ಚುನಾವಣೆ ನಡೆಸಲಾಯಿತು’ ಎಂದು ಮಹೇಶ ‘ಪ್ರಜಾವಾಣಿ’ಗೆ ತಿಳಿಸಿದರು.

‘ಚಾಲಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವಂತೆ ಪೊಲೀಸ್ ಕಮಿಷನರ್ ಅವರಿಗೂ ಮನವಿ ಸಲ್ಲಿಸಲಾಗಿದೆ. 130ಕ್ಕೂ ಹೆಚ್ಚು ಕುಟುಂಬಗಳು ಈ ವೃತ್ತಿಯನ್ನೇ ನಂಬಿಕೊಂಡಿವೆ. ಸಮಸ್ಯೆಗಳು ಬಗೆಹರಿದರೆ ಎಲ್ಲರಿಗೂ ಅನುಕೂಲವಾಗಲಿದೆ’ ಎಂದು ಅವರು ಹೇಳಿದರು.

ADVERTISEMENT

ಮಹಾನಗರ ವ್ಯಾಪ್ತಿಯಲ್ಲಿ ಸಂಚರಿಸಲು ಓಲಾ ಅನುಮತಿ ಪಡೆದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯುವ ಹಾಗೂ ದಾಖಲೆ ಸಲ್ಲಿಸುವ ಪ್ರಕ್ರಿಯೆ ಜಾರಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.