ಧಾರವಾಡ: ಅಮೃತ ಭಾರತ್ ಯೋಜನೆಯಡಿ ಅಳ್ನಾವರ ತಾಲ್ಲೂಕು ಕೇಂದ್ರದ ರೈಲು ನಿಲ್ದಾಣ ನವೀಕರಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಕೇಂದ್ರ ಸರ್ಕಾರವು ರೈಲ್ವೆ ಮಾರ್ಗಗಳ ವಿದ್ಯುದೀಕರಣಕ್ಕೆ ಒತ್ತು ನೀಡಿದೆ. ಕಳೆದ ಒಂಬತ್ತು ವರ್ಷಗಳಲ್ಲಿ 33 ಸಾವಿರ ಕಿಲೋ ಮೀಟರ್ ಮಾರ್ಗದಲ್ಲಿ ವಿದ್ಯುದೀಕರಣ ಮಾಡಲಾಗಿದೆ ಎಂದರು.
ದೇಶದಲ್ಲಿ ಈಗ 58 ಸಾವಿರ ಕಿ. ಮೀ ಮಾರ್ಗ ವಿದ್ಯುದ್ದೀಕರಣ ಆಗಿದೆ. ಯುಪಿಎ ಸರ್ಕಾರ ಇದ್ದಾಗ 20 ಸಾವಿರ ಕಿ.ಮೀ ಮಾರ್ಗ ವಿದ್ಯುದ್ದೀಕರಣ ಮಾಡಿತ್ತು ಅಷ್ಟೆ ಎಂದರು.
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈಲ್ವೆ ಮೂಲಸೌಕರ್ಯಕ್ಕೆ ₹47 ಸಾವಿರ ಕೋಟಿ ಒದಗಿಸಿದೆ. ಪ್ರತಿವರ್ಷ ಬಜೆಟ್ ನಲ್ಲಿ ಕರ್ನಾಟಕಕ್ಕೆ ರೈಲ್ವೆ ಕಾಮಗಾರಿಗಳಿಗೆ ₹ 7 ಸಾವಿರ ಕೋಟಿಗೂ ಹೆಚ್ಚು ಅನುದಾನ ಒದಗಿಸಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.