ADVERTISEMENT

ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ಶಾಸಕ ಮಹೇಶ ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 16 ಮೇ 2024, 7:26 IST
Last Updated 16 ಮೇ 2024, 7:26 IST
<div class="paragraphs"><p>ಶಾಸಕ ಮಹೇಶ ಟೆಂಗಿನಕಾಯಿ</p></div>

ಶಾಸಕ ಮಹೇಶ ಟೆಂಗಿನಕಾಯಿ

   

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆ ನಡೆದಿದ್ದು ಹುಬ್ಬಳ್ಳಿಯನ್ನು ಬೆಚ್ಚಿ ಬೀಳಿಸಿದೆ. ಇದರಲ್ಲಿ ಸರ್ಕಾರದ ಲೋಪ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಬುಧವಾರ ಹತ್ಯೆಯಾದ ಅಂಜಲಿ ನಿವಾಸಕ್ಕೆ ಗುರುವಾರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ಬೆದರಿಕೆ ಹಾಕಿದ್ದಾಗ ಅಂಜಲಿ ಹಾಗೂ ಆಕೆಯ ಅಜ್ಜಿ ಬೆಂಡಿಗೇರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಎಚ್ಚೆತ್ತುಕೊಂಡಿದ್ದರೇ ಈ ಘಟನೆ ನಡೆಯುತ್ತಿರಲಿಲ್ಲ ಎಂದರು.

ADVERTISEMENT

ಅಂಜಲಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು.

ಘಟನೆಗೆ ಸಂಬಂಧಿಸಿದಂತೆ ಹು-ಧಾ ಪೊಲೀಸ್ ಕಮೀಷನರ್ ಅವರು ಬೆಂಡಿಗೇರಿ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಸರ್ಕಾರ, ಪೊಲೀಸ್ ಇಲಾಖೆಯ ಲೋಪ ಆಗಿದ್ದು ಸ್ಪಷ್ಟವಾಗಿ ಕಂಡು ಬಂದಿದೆ ಎಂದರು.

ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಈಗ ಜನಾಕ್ರೋಶ ಎಷ್ಟಿದೆ ಎಂದರೆ ಇಂತಹ ಆರೋಪಿಗಳನ್ನು ಗುಂಡಕ್ಕಿ ಕೊಲ್ಲಬೇಕು ಎಂದು ಜನ ಒತ್ತಾಯ ಮಾಡುತಿದ್ದಾರೆ. ಜನರು ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.