ADVERTISEMENT

ಧಾರವಾಡ | ಮತದಾರರ ಮಾಹಿತಿ ಸಂಗ್ರ: ಕಂಪನಿ ಸಿಬ್ಬಂದಿಯ ಲ್ಯಾಪ್‌ಟಾಪ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 5:43 IST
Last Updated 3 ಡಿಸೆಂಬರ್ 2022, 5:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಚುನಾವಣಾ ಪೂರ್ವ ಸಮೀಕ್ಷೆ ಹೆಸರಿನಲ್ಲಿ ಖಾಸಗಿ ಕಂಪನಿಯವರು ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದ ಪ್ರಕರಣದ ತನಿಖೆಯನ್ನು ಚುರುಕಗೊಳಿಸಿರುವ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು, ವಸತಿ ಗೃಹವೊಂದರಲ್ಲಿ ಉಳಿದುಕೊಂಡಿದ್ದ ಎಎಸ್‌ಆರ್ ಕಂಪನಿ ಸಿಬ್ಬಂದಿಯ ಲ್ಯಾಪ್‌ಟಾಪ್‌ ಅನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ವಶಕ್ಕೆ ಪಡೆದಿರುವ ಸಿಬ್ಬಂದಿ, ಸಮೀಕ್ಷೆ ವೇಳೆ ಸ್ಥಳೀಯರು ಎಂದು ಹೇಳಿಕೊಂಡು ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು. ಆದರೆ, ಅವರು ಸ್ಥಳೀಯರಲ್ಲ ಎಂಬ ಅಂಶ ವಿಚಾರಣೆಯಲ್ಲಿ ಗೊತ್ತಾಗಿದೆ. ಸಿಬ್ಬಂದಿಯ ಲ್ಯಾಪ್‌ಟಾಪ್‌ನಲ್ಲಿ ಏನೆಲ್ಲಾ ಮಾಹಿತಿಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಚನ್ನಮ್ಮ ವೃತ್ತದ ಬಳಿಯ ವಸತಿ ಗೃಹದಲ್ಲಿದ್ದ ಸಿಬ್ಬಂದಿಯ ಮಾಹಿತಿಯನ್ನು ಪಡೆಯಲಾಗಿದೆ. ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದ ಮೂವರೂ, ಮಾಹಿತಿ ಸಂಗ್ರಹಕ್ಕಾಗಿ ನಿತ್ಯ ವಿವಿಧ ವಾರ್ಡ್‌ಗಳಲ್ಲಿ ಸುತ್ತಾಡುತ್ತಿದ್ದರು. ಸದ್ಯ, ಹರಿಯಾಣ ಮೂಲದ ಕಂಪನಿಯ ಸ್ಥಳೀಯ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಗುರುವಾರವೇ ಬುಲಾವ್ ನೀಡಿದ್ದ ಪೊಲೀಸರು, ಇಂದು ಕೆಲವರನ್ನು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.