ಹುಬ್ಬಳ್ಳಿ: ಸರ್ಕಾರದ ಆದೇಶದ ಪ್ರಕಾರ, ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಬೇಕು ಎಂದು ಆಗ್ರಹಿಸಿ, ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘದ ಸದಸ್ಯರು ನಗರದ ಮಹಾನಗರ ಪಾಲಿಕೆ ಎದುರು ಸೋಮವಾರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದಾರೆ.
ಪೌರ ಕಾರ್ಮಿಕರು ಅವಳಿ ನಗರದಲ್ಲಿ ಸ್ವಚ್ಚತಾ ಕಾರ್ಯವನ್ನು ಬದಿಗೊತ್ತಿ, ಪಾಲಿಕೆ ಎದುರಿಗೆ ಧರಣಿ ಮಾಡುತ್ತಿದ್ದಾರೆ.
ಪಾಲಿಕೆಯು ಕಾರ್ಮಿಕರ ಬೇಡಿಕೆಗಳನ್ನು ಕಡೆಗಣಿಸುತ್ತಾ ಬಂದಿದೆ. ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.