ADVERTISEMENT

ಹುಬ್ಬಳ್ಳಿಗೆ ಜೋಶಿ ಆಗಮನ ಇಂದು

ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2024, 0:20 IST
Last Updated 14 ಜೂನ್ 2024, 0:20 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಲ್ಹಾದ ಜೋಶಿ ಜೂನ್‌ 14ರಂದು ಹುಬ್ಬಳ್ಳಿಗೆ ಆಗಮಿಸಲಿದ್ದು, ಅದ್ಧೂರಿ  ಸ್ವಾಗತ ಕೋರಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ.

ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು,  ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರದಿಂದ ಸತತ 5ನೇ ಬಾರಿ ಐತಿಹಾಸಿಕ ಗೆಲುವು ಸಾಧಿಸಿರುವ ಸಂಸದ ಪ್ರಲ್ಹಾದ ಜೋಶಿ ಅವರು ಕೇಂದ್ರದಲ್ಲಿ ಸತತ 2ನೇ ಬಾರಿ ಸಂಪುಟ ದರ್ಜೆ ಸಚಿವರಾಗಿರುವುದು ಕ್ಷೇತ್ರದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಸಂತಸ ತಂದಿದೆ.

ADVERTISEMENT

ಮೆರವಣಿಗೆ:

ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಜೋಶಿ ಅವರು ಬಂದಿಳಿಯಲಿದ್ದು, ಇಲ್ಲಿಂದ ಬೃಹತ್ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಿದ್ದರೆ ಕಾರ್ಯಕರ್ತರು. ವಿಮಾನ ನಿಲ್ದಾಣದಿಂದ ಅಕ್ಷಯ ಪಾರ್ಕ್ ಮಾರ್ಗವಾಗಿ ಹೊಸೂರ ವೃತ್ತ, ಉತ್ತರ ಟ್ರಾಫಿಕ್ ಸ್ಟೇಷನ್, ಚನ್ನಮ್ಮ ವೃತ್ತಕ್ಕೆ ಮೆರವಣಿಗೆ ಬರಲಿದೆ. ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್ ಮೂರ್ತಿಗೆ ಜೋಶಿ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕೇಶ್ವಾಪುರ ಸರ್ಕಲ್‌ನಲ್ಲಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ನೆರವೇರಿಸಿ ಅಲ್ಲಿಂದ ನೇರವಾಗಿ ಸಚಿವರು ತಮ್ಮ ನಿವಾಸಕ್ಕೆ ತೆರಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.