ADVERTISEMENT

ಕೇಂದ್ರ ಸಚಿವರಾಗಿ ಪ್ರಲ್ಹಾದ ಜೋಶಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 16:32 IST
Last Updated 11 ಜೂನ್ 2024, 16:32 IST
ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಮಂಗಳವಾರ ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಮಂಗಳವಾರ ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ ಜೋಶಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   

ಹುಬ್ಬಳ್ಳಿ: ಪ್ರಲ್ಹಾದ ಜೋಶಿ ಅವರು ಮಂಗಳವಾರ ದೆಹಲಿಯಲ್ಲಿ ಗ್ರಾಹಕರ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

‘2047ರ ವೇಳೆಗೆ ಭಾರತ ಇಂಧನ ಸ್ವಾವಲಂಬನೆ ಸಾಧಿಸಬೇಕು ಎಂಬುದು ನಮ್ಮ ಸಂಕಲ್ಪ. ಹೊಸ ಮತ್ತು ನವೀಕರಿಸಬಹುದಾದ ಇಂಧನದಲ್ಲಿ ದೇಶವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ದೃಷ್ಟಿಯೊಂದಿಗೆ ಹೊಸ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು’ ಎಂದು ಜೋಶಿ ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಜನರಿಗೆ ಆಹಾರ ಭದ್ರತೆ ಖಾತರಿಪಡಿಸಲು ಬದ್ಧರಾಗಿದ್ದೇವೆ ಮತ್ತು ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು  ತಿಳಿಸಿದರು.

ADVERTISEMENT

ಕಚೇರಿಯಲ್ಲಿ ಪೂಜೆ: ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ ಪ್ರಲ್ಹಾದ ಜೋಶಿ ಅವರು ತಮ್ಮ ಕಚೇರಿಯಲ್ಲಿ ಕುಟುಂಬ ಮತ್ತು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿದರು. ಪತ್ನಿ ಜ್ಯೋತಿ ಜೋಶಿ ಮತ್ತು ಪುತ್ರಿಯರು ಭಾಗವಹಿಸಿದ್ದರು.

ಉನ್ನತ ಅಧಿಕಾರಿಗಳ ಸಭೆ: ನೂತನ ಖಾತೆಗಳ ಅಧಿಕಾರ ವಹಿಸಿಕೊಂಡ ಬಳಿಕ ಪ್ರಲ್ಹಾದ ಜೋಶಿ ಆಯಾ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಔಪಚಾರಿಕ ಸಭೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.