ADVERTISEMENT

ಬೆಂಗಳೂರಿನಲ್ಲಿ 18ರಂದು ಸಿ.ಎಂ ಸಭೆ: ಸ್ವಾಮೀಜಿ

ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿಗಾಗಿ ಹೋರಾಟ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 1:37 IST
Last Updated 15 ಅಕ್ಟೋಬರ್ 2024, 1:37 IST
ಬಸವಜಯ ಮೃತ್ಯುಂಜಯ ಸ್ವಾಮೀಜಿ 
ಬಸವಜಯ ಮೃತ್ಯುಂಜಯ ಸ್ವಾಮೀಜಿ    

ಧಾರವಾಡ: ‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಷಯ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಅಕ್ಟೋಬರ್ 18ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆದಿದ್ದಾರೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

‘ಮುಖ್ಯಮಂತ್ರಿ ಭೇಟಿಗೆ ಲಿಂಗಾಯತ ಪಂಚಮಸಾಲಿ ವಕೀಲರ ಒಕ್ಕೂಟದ 11 ವಕೀಲರ ನಿಯೋಗ ರಚಿಸಲಾಗಿದೆ. ಬೇಡಿಕೆಗೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸುವರು ಎಂಬ ವಿಶ್ವಾಸವಿದೆ. ಸಮಾಜದ ವಕೀಲರ ಒಕ್ಕೂಟ, ಯುವ, ಮಹಿಳಾ ಘಟಕ ಸೇರಿ ಎಲ್ಲ ಘಟಕಗಳವರು, ಜನಪ್ರತಿನಿಧಿಗಳು ಬೆಂಗಳೂರಿಗೆ ಬರಬೇಕು’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ 15 ಮತ್ತು 16ನೇ ಪರಿಚ್ಛೇದದಡಿ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿಯವರು ನ್ಯಾಯ ಒದಗಿಸಬೇಕು. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಆಧರಿಸಿ ನೀಡಿರುವ ಮಧ್ಯಂತರ ವರದಿಯನ್ನು ಪರಿಗಣಿಸಿ ಕ್ರಮ ವಹಿಸಬೇಕು’ ಎಂದು ಕೋರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.