ADVERTISEMENT

‘ಪೋಕ್ಸೊ, ಬಾಲ್ಯ ವಿವಾಹ ತಡೆಗೆ ಕ್ರಮವಹಿಸಿ’ 

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 16:11 IST
Last Updated 12 ಸೆಪ್ಟೆಂಬರ್ 2024, 16:11 IST
ಧಾರವಾಡದಲ್ಲಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಉದ್ಘಾಟಿಸಿದರು
ಧಾರವಾಡದಲ್ಲಿ ಏರ್ಪಡಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಉದ್ಘಾಟಿಸಿದರು   

ಧಾರವಾಡ: ‘ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ), ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತೆಡೆಗಟ್ಟಲು ಎಲ್ಲ ಅಧಿಕಾರಿಗಳು ಕ್ರಮವಹಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು.

ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ

ನಗರದ ಆಲೂರು ವೆಂಕಟರಾವ್ ಭವನದಲ್ಲಿ ಪ್ರೌಢಶಾಲೆ ಮುಖ್ಯಶಿಕ್ಷಕರಿಗೆ ಹಾಗೂ ವಸತಿ ನಿಲಯದ ಪಾಲಕರಿಗೆ ವಿವಿಧ ಕಾನೂನುಗಳ ಕುರಿತು ಗುರುವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ  ಅವರು, ‌‌‘ಜನರಿಗೆ ನೈತಿಕ ಮೌಲ್ಯಗಳನ್ನು ತಿಳಿಸಬೇಕು. ಕಾನೂನುಗಳ ಅರಿವು ಮತ್ತು ಜಾಗೃತಿ ಮೂಡಿಸಬೇಕು’ ಎಂದರು. 

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕಿ ಎಚ್.ಎಚ್. ಕುಕನೂರ,  ‘ಬಾಲ್ಯ ವಿವಾಹ ನಿಷೇಧ ಕುರಿತು ಶಾಲೆಗಳು, ವಸತಿ ನಿಲಯಗಳಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಪ್ರಭಾರ) ಜಿಲ್ಲಾ ಅಧಿಕಾರಿ ಗೋಪಾಲ.ಎಚ್.ಲಮಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.