ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 8:22 IST
Last Updated 29 ಫೆಬ್ರುವರಿ 2024, 8:22 IST
   

ಧಾರವಾಡ: ಜಿಲ್ಲಾಸ್ಪತ್ರೆಯಲ್ಲಿ ವಿವಿಧ ಪರೀಕ್ಷೆಗಳಿಗೆ ಶುಲ್ಕ ನಿಗದಿಪಡಿಸಿರುವುದನ್ನು ಕೈಬಿಡಬೇಕು, ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಬೇಕು, ನಗರದಲ್ಲಿ ಸ್ವಚ್ಛತೆ ನಿರ್ವಹಣೆಗೆ ಕ್ರಮ ವಹಿಸಬೇಕು, ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಕೂಲಿ ಬಿಡುಗಡೆ ಮಾಡಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಜಿಲ್ಲಾ ಘಟಕ ಸಹಿತ ವಿವಿಧ ಸಂಘಟನೆಗಳವರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಮಾವೇಶಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ಮೂರು ತಿಂಗಳಿನಿಂದ ಕೂಲಿ ಪಾವತಿಸಿಲ್ಲ. ತಕ್ಷಣವೇ ಕೂಲಿ ಹಣ ಬಿಡುಗಡೆ ಮಾಡಬೇಕು. ಖಾತ್ರಿ ಯೋಜನೆಯಡಿ ವಾರ್ಷಿಕ 200 ದಿನ ಕೆಲಸ ನೀಡಬೇಕು, ಕೂಲಿಯನ್ನು ₹ 600ಕ್ಕೆ ಹಚ್ಚಿಸಬೇಕು ಎಂದು ಆಗ್ರಹಿಸಿದರು.

ಬೆಲೆ ಏರಿಕೆ ತಡಗಟ್ಟಬೇಕು, ವಸತಿರಹಿತರಿಗೆ ಹಕ್ಕುಪತ್ರ ನೀಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಯ ಎಂದು ಒತ್ತಾಯಿಸಿದರು.

ADVERTISEMENT

ದೀಪಾ ಧಾರವಾಡ, ಭುವನಾ ಬಳ್ಳಾರಿ, ಮಧುಲತಾ, ಶರಣಬಸವ, ಲಕ್ಷ್ಮಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.