ಹುಬ್ಬಳ್ಳಿ: ‘ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಿಂಪಡೆಯುವ ಕುರಿತು ಮಾತನಾಡಿರಬಹುದು. ಆದರೆ, ಜಾತಿ ವ್ಯವಸ್ಥೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಇರುತ್ತದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಸಮಾನತೆ ಬರುವವರೆಗೆ ಮೀಸಲಾತಿ ಇರುತ್ತದೆ. ಅದು ಬಂದ ನಂತರ ಮೀಸಲಾತಿ ತೆಗೆಯುವುದಾಗಿ ರಾಹುಲ್ ಗಾಂಧಿ ಹೇಳಿರಬಹುದು’ ಎಂದರು.
‘ಭ್ರಷ್ಟಾಚಾರದ ವಿಷಯದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿಲ್ಲ. ಬಿಜೆಪಿ ಅವಧಿಯಲ್ಲಿ ಕೆಲವು ಭ್ರಷ್ಟಾಚಾರಗಳು ನಡೆದಿರುವ ಕುರಿತು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ತನಿಖೆಯ ಉಸ್ತುವಾರಿಗೆ ಸಚಿವರ ಸಮಿತಿ ರಚಿಸಲಾಗಿದೆ. ಆದರೆ, ಅದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿಯಿಲ್ಲ. ತನಿಖೆ ನಡೆದರೆ ತಪ್ಪೇನು’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.