ADVERTISEMENT

‘ಸಿಎಂ–ಡಿಸಿಎಂ ಬೇಡಿಕೆ: ಆಡಳಿತ ವ್ಯವಸ್ಥೆ ಮೇಲೆ ದುಷ್ಪರಿಣಾಮ’

​ಪ್ರಜಾವಾಣಿ ವಾರ್ತೆ
Published 28 ಜೂನ್ 2024, 15:58 IST
Last Updated 28 ಜೂನ್ 2024, 15:58 IST
ಜಗದೀಶ ಶೆಟ್ಟರ್‌
ಜಗದೀಶ ಶೆಟ್ಟರ್‌   

ಹುಬ್ಬಳ್ಳಿ: ‘ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಯ ಕಿತ್ತಾಟ ತಾರಕಕ್ಕೇರಿದೆ. ಪಕ್ಷದ ಹೈಕಮಾಂಡ್‌ ಯಾವುದನ್ನೂ ಸ್ಪಷ್ಟವಾಗಿ ಹೇಳುತ್ತಿಲ್ಲ. ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕುವ ಕೆಲಸ ನಡೆದಿದೆ. ಇಂತಹ ಪರಿಸ್ಥಿತಿಯಿಂದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ  ಹದೆಗೆಡುತ್ತದೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಪ್ರತಿಕ್ರಿಯಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎನ್ನುವ ಕೂಗಿನ ಜೊತೆಗೆ ಈಗ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂದು ಎಂಬ ಗೊಂದಲ ನಿರ್ಮಿಸಲಾಗುತ್ತಿದೆ. ಯಾರ ಮನದಲ್ಲಿ ಏನಿದೆ ಎಂಬುದನ್ನು ಬೇರೆಯವರಿಂದ ಹೇಳಿಸುವ ಪ್ರಯತ್ನ ನಡೆದಿದೆ. ಏನಿದ್ದರೂ ನೇರವಾಗಿ ಹೈಕಮಾಂಡ್‌ ಮುಂದೆ ಹೇಳಬೇಕು’ ಎಂದರು.

‘ಮುಖ್ಯಮಂತ್ರಿ ಹುದ್ದೆಗೆ ಮೊದಲಿನಿಂದಲೂ ಗುದ್ದಾಟವಿದ್ದು, ಮುಂದುವರಿದಿದೆ. ಬಿಜೆಪಿ ಆಪರೇಷನ್‌ ಕಮಲ ಮಾಡಬೇಕಿಲ್ಲ. ಕಾಂಗ್ರೆಸ್‌ನ ಒಳಬೇಗುದಿ ಮತ್ತು ಶಾಸಕರ ಅಸಮಾಧಾನವು ಸರ್ಕಾರದ ಮೇಲೆ ದುಷ್ಪರಿಣಾಮ ಬೀರಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.