ADVERTISEMENT

ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿ ಮನೆಗೆ ಹೋಗಿ ಸಮವಸ್ತ್ರ ಧರಿಸಿ ಪರೀಕ್ಷೆಗೆ ವಾಪಸ್

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2022, 7:04 IST
Last Updated 28 ಮಾರ್ಚ್ 2022, 7:04 IST
ಪರೀಕ್ಷಾ ಕೊಠಡಿಗೆ ತೆರಳುತ್ತಿರುವ ವಿದ್ಯಾರ್ಥಿನಿ
ಪರೀಕ್ಷಾ ಕೊಠಡಿಗೆ ತೆರಳುತ್ತಿರುವ ವಿದ್ಯಾರ್ಥಿನಿ   

ಹುಬ್ಬಳ್ಳಿ: ನಗರದ ಘಂಟಿಕೇರಿಯ ಶಾಂತಿನಿಕೇತನ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ, ವಾಪಸ್ಸು ಮನೆಗೆ ತೆರಳಿ ಶಾಲಾ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾದಳು.

ಪರೀಕ್ಷಾ ಕೇಂದ್ರದ ಆವರಣದಲ್ಲಿಯೇ ವಿದ್ಯಾರ್ಥಿನಿಯನ್ನು ತಡೆದ ಪರೀಕ್ಷಾ ಸಿಬ್ಬಂದಿ, ಹಿಜಾಬ್ ತೆಗೆದು ಶಾಲಾ ಸಮವಸ್ತ್ರ ಧರಿಸುವಂತೆ ಸೂಚಿಸಿದರು. ನಂತರ ಪಾಲಕರ ಜೊತೆ ಮನೆಗೆ ತೆರಳಿದ ವಿದ್ಯಾರ್ಥಿನಿ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾದಳು.

ಘಂಟಿಕೇರಿ ಪಿಯು ಕಾಲೇಜ್ ಹಾಗೂ ಇತರ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಬಂದಿದ್ದರು. ಪರೀಕ್ಷಾ ಕೇಂದ್ರದಲ್ಲಿ ತೆರದ ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತೆಗೆದಿರಿಸಿ, ಸಮವಸ್ತ್ರದಲ್ಲಿ ಪರೀಕ್ಷಾ ಕೊಠಡಿಗೆ ತೆರಳಿದರು.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಡಿಡಿಪಿಐ ಎಸ್.ಎಸ್. ಕೆಳದಿಮಠ, ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶವಿಲ್ಲ. ಶಾಲಾ ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಬರಬೇಕು. ಈ ಕುರಿತು ಎಲ್ಲ ವಿದ್ಯಾರ್ಥಿನಿಯರಿಗೂ ಹಾಗೂ ಅವರ ಪಾಲಕರಿಗೆ ತಿಳಿಸಲಾಗಿದೆ. ಆದರೂ, ಕೆಲವು ಕೇಂದ್ರಗಳಲ್ಲಿ ಸಮವಸ್ತ್ರ ಧರಿಸದೆ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇವತ್ತೊಂದು ದಿನ ಅವಕಾಶ ನೀಡಲಾಗಿದೆ. ನಾಳೆಯಿಂದ ಕಡ್ಡಾಯವಾಗಿ ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಬರಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.